ಕೆಜಿಎಫ್ 100 ದಿನದ ಸಂಭ್ರಮ 
ಸಿನಿಮಾ ಸುದ್ದಿ

100 ದಿನ ಪೂರೈಸಿದ ಕೆಜಿಎಫ್-2: ಇದು ಕೇವಲ ಆರಂಭ ಎಂದು ನಿರ್ಮಾಪಕ!

ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್​ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ.

ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್​ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ.

ಈ ಖುಷಿಯನ್ನು ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ಸಂಭ್ರಮಿಸಿದೆ. ಇಷ್ಟು ದೊಡ್ಡ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಲಾಗಿದೆ. ‘ಕೆಜಿಎಫ್​ 2’ ಚಿತ್ರದ ಪ್ರಮುಖ ತುಣುಕುಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ 100 ದಿನಗಳ ಯಶಸ್ವಿ ಪ್ರಯಾಣವನ್ನು ಸಂಭ್ರಮಿಸಲಾಗಿದೆ. ಇಂಥ ಅಭೂತಪೂರ್ವ ಗೆಲುವಿಗೆ ಕಾರಣರಾದ ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ್ ಕಿರಗಂದೂರು ಟ್ವೀಟ್ ಮಾಡಿ, ಅಭಿಮಾನಿಗಳ ಜೊತೆ ತಾವು ಎಷ್ಟು ಹೆಮ್ಮೆಪಡುತ್ತಿದ್ದೇವೆಂದು ಎಂದು ಹಂಚಿಕೊಂಡಿದ್ದು, ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.“ನಮಗಾಗಿ ಈ ಅದ್ಭುತ ಪ್ರಯಾಣವನ್ನು ಸ್ಕ್ರಿಪ್ಟ್ ಮಾಡಿದ್ದಕ್ಕೆ ಧನ್ಯವಾದಗಳು. ನಾವು ಇನ್ನೂ ಇದೇ ರೀತಿಯ ಅದ್ಬುತ ಪ್ರಾಜೆಕ್ಟ್​ಗಳನ್ನು ನೀಡಲು ಸಿದ್ದರಿದ್ದೇವೆ ಎಂದು ಭರವಸೆ ನೀಡುತ್ತೇವೆ ಎಂದು ಬರೆದುಕೊಂಡಿದೆ.

ಕೆಜಿಎಫ್ ಚಾಪ್ಟರ್​ 2’ ಸಿನಿಮಾ ಬಿಡುಗಡೆ ಆಯಿತು. ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಕಂಡ ಈ ಚಿತ್ರಕ್ಕೆ ಎಲ್ಲ ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಈ ವರ್ಷ ಬಹುದೊಡ್ಡ ಓಪನಿಂಗ್​ ಪಡೆದುಕೊಂಡ ಸಿನಿಮಾ ಎಂಬ ಖ್ಯಾತಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ್ದಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT