ದಿಗಂತ್ 
ಸಿನಿಮಾ ಸುದ್ದಿ

ಗೋವಾ ಬೀಚ್‌ನಲ್ಲಿ 'ಪಲ್ಟಿ' ಹೊಡೆಯುವಾಗ ನಟ ದಿಗಂತ್ ಬೆನ್ನು ಮೂಳೆಗೆ ಬಲವಾದ ಪೆಟ್ಟು, ಬೆಂಗಳೂರಿಗೆ ಏರ್​ಲಿಫ್ಟ್​!

ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ನಟ ದಿಗಂತ್ ಬೆನ್ನು ಮೂಳೆಗೆ, ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದಿದ್ದು ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.

ಪಣಜಿ: ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ನಟ ದಿಗಂತ್ ಬೆನ್ನು ಮೂಳೆಗೆ, ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದಿದ್ದು ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.

ಆಸ್ಪತ್ರೆಯ ಮೂಲಗಳ ಪ್ರಕಾರ, ಅವರು ತಮ್ಮ ಪತ್ನಿ ಐಂದ್ರಿತಾ ರೈ ಅವರೊಂದಿಗೆ ರಜೆಗಾಗಿ ಗೋವಾಕ್ಕೆ ಬಂದಿದ್ದರು. ಫಿಟ್‌ನೆಸ್ ಫ್ರೀಕ್ ಆಗಿರುವ ಮತ್ತು ಸಾಹಸ ಕ್ರೀಡೆಗಳನ್ನು ಇಷ್ಟಪಡುವ ದಿಗಂತ್ ಸಮ್ಮರ್‌ಸಾಲ್ಟ್ ಮಾಡುವಾಗ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತದೆ.

ಆರಂಭದಲ್ಲಿ ದಿಗಂತ್ ಅವರನ್ನು ಗೋವಾದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನು ವಿಮಾನದ ಮೂಲಕ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಯಿತು.

ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಆಸ್ಪತ್ರೆಯ ವೈದ್ಯರು ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿಯನ್ನು ತಿಳಿಸುವುದಾಗಿ ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ ಚಿತ್ರವೊಂದರ ಚಿತ್ರೀಕರಣದ ವೇಳೆ ದುರ್ಘಟನೆಯೊಂದು ನಡೆದಿತ್ತು. ಈ ಚಿತ್ರೀಕರಣದ ವೇಳೆ ದಿಗಂತ್ ಕಣ್ಣೊಂದಕ್ಕೆ ಹಾನಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ