ರಜಿನಿಕಾಂತ್ - ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

‘777 ಚಾರ್ಲಿ’ ವೀಕ್ಷಿಸಿ ರಕ್ಷಿತ್ ಶೆಟ್ಟಿಗೆ ಕಾಲ್ ಮಾಡಿದ ರಜಿನಿಕಾಂತ್, ಚಿತ್ರದ ಬಗ್ಗೆ ಮೆಚ್ಚುಗೆ!

ಪ್ರಾಣಿಪ್ರಿಯರಿಗೆ ಇಷ್ಟವಾಗುವ ಹಾಗೂ ಮನುಷ್ಯ ಮತ್ತು ನಾಯಿಗಳ ಸಂಬಂಧವಿರುವ, ಅದ್ಭುತ ಕಥಾಹಂದರವುಳ್ಳ ಚಿತ್ರವನ್ನು ಸೂಪರ್ ಸ್ಟಾರ್ ರಜಿನೀಕಾಂತ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪ್ರಾಣಿಪ್ರಿಯರಿಗೆ ಇಷ್ಟವಾಗುವ ಹಾಗೂ ಮನುಷ್ಯ ಮತ್ತು ನಾಯಿಗಳ ಸಂಬಂಧವಿರುವ, ಅದ್ಭುತ ಕಥಾಹಂದರವುಳ್ಳ ಚಿತ್ರವನ್ನು ಸೂಪರ್ ಸ್ಟಾರ್ ರಜಿನೀಕಾಂತ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಜಿನಿಕಾಂತ್ ಅವರು ತಮಗೆ ದೂರವಾಣಿ ಕರೆ ಮಾಡಿ ತಿಳಿಸಿರುವುದಾಗಿ ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

ಈ ಕುರಿತು ಸ್ವತಃ 777 ಚಾರ್ಲಿ ಚಿತ್ರದ ನಾಯಕ ನಟ ರಕ್ಷಿತ್ ಶೆಟ್ಟಿ, ದಿನದ ಅದ್ಭುತ ಆರಂಭ! ಎಂದು ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ.

“ರಜನಿಕಾಂತ್ ಸರ್ ಅವರಿಂದ ನನಗೆ ಕರೆ ಬಂದಿತ್ತು. ಅವರು ನಿನ್ನೆ ರಾತ್ರಿ #777ಚಾರ್ಲಿಯನ್ನು ವೀಕ್ಷಿಸಿದ್ದಾರೆ. ಚಿತ್ರದ ಬಗ್ಗೆ ವಿಸ್ಮಯ ವ್ಯಕ್ತಪಡಿಸಿದ್ದಾರೆ. ಚಿತ್ರದ ಮೇಕಿಂಗ್ ಗುಣಮಟ್ಟ, ಆಳವಾದ ಕಥೆ ವಿನ್ಯಾಸಗಳ ಬಗ್ಗೆ ಹೆಚ್ಚು ಮಾತನಾಡಿದರು. ವಿಶೇಷವಾಗಿ ಕ್ಲೈಮ್ಯಾಕ್ಸ್ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ಎಂದು ರಕ್ಷಿತ್ ಶೆಟ್ಟಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

777 ಚಾರ್ಲಿ ಚಿತ್ರದ ಬಗ್ಗೆ ಅಭೂತಪೂರ್ವ ಪ್ರಶಂಸೆಗಳು ವ್ಯಕ್ತವಾಗುತ್ತಿದ್ದು, ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಥಿಯೇಟರ್ ನಲ್ಲಿ ಚಿತ್ರ ವೀಕ್ಷಿಸಿ, ಬಳಿಕ ತೆರಿಗೆ ಮುಕ್ತಗೊಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್