ನಟಿ ಮೀನಾ 
ಸಿನಿಮಾ ಸುದ್ದಿ

ಬಹುಭಾಷಾ ನಟಿ ಮೀನಾ ಪತಿ ವಿದ್ಯಾ ಸಾಗರ್ ನಿಧನ

ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಮುಂಜಾನೆ ನಿಧನರಾಗಿದ್ದಾರೆ.

ಚೆನ್ನೈ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಮುಂಜಾನೆ ನಿಧನರಾಗಿದ್ದಾರೆ. 

ಇತ್ತೀಚಿನ ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಮೀನಾ ಅವರ ಪತಿ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಹಿರಿಯ ನಟ ಶರತ್ ಕುಮಾರ್ ಟ್ವಿಟರ್ ಮೂಲಕ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿದ ಮೀನಾ ಅವರ ಸ್ನೇಹಿತರು, ಅಭಿಮಾನಿಗಳು ಮತ್ತು ಕುಟುಂಬದ ಹಿತೈಷಿಗಳಿಗೆ ಈ ಸುದ್ದಿ ಆಘಾತವನ್ನುಂಟು ಮಾಡಿದೆ ಮತ್ತು ದುಃಖಿತ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇವೆಂದು ಹೇಳಿದ್ದಾರೆ. 

ಕನ್ನಡ ಸೇರಿದಂತೆ ವಿವಿಧ ಭಾಷಾ ಚಿತ್ರಗಳಲ್ಲಿ ನಟಿಸಿದ್ದ ಮೀನಾ, 2009 ರಲ್ಲಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ 11 ವರ್ಷದ ನೈನಿಕಾ ಎಂಬ ಮಗಳಿದ್ದಾಳೆ, ತಾಯಿಯ ಹಾದಿಯನ್ನು ಅನುಸರಿಸುತ್ತಿರುವ ನೈನಿಕಾ 'ತೇರಿ' ಚಿತ್ರದಲ್ಲಿ ಬಾಲನಟಿಯಾಗಿ ತೆರೆಯ ಮೇಲೆ ಪಾದಾರ್ಪಣೆ ಮಾಡಿದ್ದಾರೆ.

ವಿದ್ಯಾ ಸಾಗರ್ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಾಹದ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!