ಬಿಎಸ್ ಅವಿನಾಶ್ 
ಸಿನಿಮಾ ಸುದ್ದಿ

ಬೆಂಗಳೂರು: ಕೆಜಿಎಫ್ ನಟ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಕೆಜಿಎಫ್ ನಟ ಬಿಎಸ್ ಅವಿನಾಶ್ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿಗೆ ಅನಿಲ್ ಕುಂಬ್ಳೆ ವೃತ್ತದ ಬಳಿ ಬುಧವಾರ ಕಂಟೈನರ್ ವೊಂದು  ಡಿಕ್ಕಿ ಹೊಡೆದೆದಿದ್ದು, ಅಪಘಾತದಲ್ಲಿ ಐಷಾರಾಮಿ ಕಾರು  ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೆಂಗಳೂರು: ಕೆಜಿಎಫ್ ನಟ ಬಿಎಸ್ ಅವಿನಾಶ್ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿಗೆ ಅನಿಲ್ ಕುಂಬ್ಳೆ ವೃತ್ತದ ಬಳಿ ಬುಧವಾರ ಕಂಟೈನರ್ ವೊಂದು  ಡಿಕ್ಕಿ ಹೊಡೆದೆದಿದ್ದು, ಅಪಘಾತದಲ್ಲಿ ಐಷಾರಾಮಿ ಕಾರು  ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ನಟ ಅವಿನಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪರಿಣಾಮ ಕೆಜಿಎಫ್ ಚಿತ್ರದಲ್ಲಿ ಖಳನಾಯಕನ ಪಾತ್ರ ನಿರ್ವಹಿಸಿದ್ದ ಬಿ.ಎಸ್.ಅವಿನಾಶ್ ಬುಧವಾರ ಬೆಳಗ್ಗೆ ಜಿಮ್ ಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ನಟ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಅಪಘಾತದ ಕುರಿತು ಹೇಳಿಕೆಯನ್ನು ಪೋಸ್ಟ್ ಮಾಡಿರುವ ನಟ, ಕಂಟೈನರ್ ಸಿಗ್ನಲ್ ಅನ್ನು ದಾಟಿ ತಮ್ಮ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ. 

ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸರು ಕಂಟೈನರ್ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279 ರ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.

ಬೆಳಗ್ಗೆ 6.05ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಂಟೈನರ್ ಚಾಲಕನನ್ನು ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅವಿನಾಶ್ ಅವರು ಕೆಜಿಎಫ್ ಚಿತ್ರದಲ್ಲಿ ಆಂಡ್ರ್ಯೂಸ್ ಪಾತ್ರದಲ್ಲಿ ಕಾಣಿಸಿದ್ದು, ಅವರ ಪಾತ್ರಕ್ಕೆ ಎಲ್ಲಡೆ ಉತ್ತಮ ಪ್ರತಿಕ್ರಯೆ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!