ಸಿನಿಮಾ ಸುದ್ದಿ

ಪುನೀತ್ ರಾಜಕುಮಾರ್‌ಗೆ ಕರ್ನಾಟಕ ರತ್ನ: ಮುಖ್ಯ ಅತಿಥಿಯಾಗಲು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು ಎಂದ ರಜನಿಕಾಂತ್

Ramyashree GN

ದಿವಂಗತ ನಟ ‘ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ಇಂದು (ನ. 1) ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಆಗಮಿಸುತ್ತಾರೆ ಎನ್ನುವುದು ಹಳೆಯ ಸುದ್ದಿ. ಈ ಕಾರ್ಯಕ್ರಮಕ್ಕೆ ಆಗಮಿಸಲು ಉತ್ಸುಕರಾಗಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕರ್ನಾಟಕ ಸರ್ಕಾರ ನಟ ರಜನಿಕಾಂತ್ ಅವರಿಗೆ ಆಹ್ವಾನ ನೀಡಿತ್ತು. ಹೀಗಾಗಿ ನಟ ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ನಟ, 'ನ.1 ರಂದು ನವೆಂಬರ್, ಬೆಂಗಳೂರಿನ ವಿಧಾನಸೌಧದ ಸ್ಮಾರಕದ ಮೆಟ್ಟಿಲುಗಳ ಮೇಲೆ ನಡೆಯುವ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಲು ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಿಮಗೆ ಮತ್ತು ನಿಮ್ಮ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲು ನಾನು ಈ ಅವಕಾಶವನ್ನು ಬಳಸುತ್ತೇನೆ' ಎಂದಿದ್ದಾರೆ.

'ಪ್ರತಿದಿನ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಿರುವ ನಮ್ಮ ಅಪ್ಪು ನ ಈ ಸ್ಮರಣೀಯ ಸಮಾರಂಭದಲ್ಲಿ ನನ್ನ ಭಾಗವಹಿಸುವಿಕೆಯನ್ನು ದೃಢೀಕರಿಸಲು ನಾನು ಬಯಸುತ್ತೇನೆ. ನವೆಂಬರ್ 1 ರಂದು ಮಧ್ಯಾಹ್ನ 2 ಗಂಟೆಗೆ ಚೆನ್ನೈನಿಂದ ನನ್ನ ನಿರ್ಗಮನವನ್ನು ನಿಗದಿಪಡಿಸಲಾಗಿದೆ ಮತ್ತು ನಾನು ಸುಮಾರು 3 ಗಂಟೆಗೆ ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ' ಎಂದು ಹೇಳಿದ್ದಾರೆ.

ಅವರ ಅಭಿಮಾನಿಗಳು ಮತ್ತು ಚಿತ್ರರಂಗದ ಬಂಧುಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಯುವ ಪುನೀತ್ ರಾಜ್‌ಕುಮಾರ್ ಅವರು ಅಕ್ಟೋಬರ್ 29, 2021 ರಂದು ತಮ್ಮ 46 ನೇ ವಯಸ್ಸಿನಲ್ಲಿ ಹೃದಯ ಸ್ತಂಭನದಿಂದ ನಿಧನರಾದರು.

SCROLL FOR NEXT