ಭರತ್ ಕಲ್ಯಾಣ್ ಪತ್ನಿ ಪ್ರಿಯದರ್ಶಿನಿ 
ಸಿನಿಮಾ ಸುದ್ದಿ

ಡಯಟ್ ಪ್ಲಾನ್ ಬದಲಾವಣೆ ತಂದ ಆಪತ್ತು: ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ!

ಕನ್ನಡದ ಖ್ಯಾತ ನಟ ದಿವಂಗತ ಕಲ್ಯಾಣ್ ಕುಮಾರ್ ಅವರ ಸೊಸೆ ಪ್ರಿಯದರ್ಶಿನಿ ನಿಧನ ಹೊಂದಿದ್ದಾರೆ. ಕಲ್ಯಾಣ್ ಕುಮಾರ್ ಪುತ್ರ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯದರ್ಶಿನಿ ತನ್ನ ಪ್ಯಾಲಿಯೋ ಡಯಟ್ ನಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ

ಚೆನ್ನೈ: ಅನೇಕರು ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ದೇಹದ ಫಿಟ್​ನೆಸ್​ ಸರಿಯಾಗಿ ಕಾಪಾಡಿಕೊಳ್ಳಬೇಕು ಎಂಬ ಕಾರಣಕ್ಕೆ ಸಾಕಷ್ಟು ಡಯಟ್ ಪ್ಲ್ಯಾನ್​ಗಳನ್ನು ಮಾಡುತ್ತಾರೆ. ಕೆಲವೊಮ್ಮೆ ಇದೇ ಮುಳುವಾಗುವ ಸಾಧ್ಯತೆ ಇರುತ್ತದೆ. ಈಗ ಇದೇ ರೀತಿಯ ಘಟನೆ ನಡೆದಿದೆ.

ಕನ್ನಡದ ಖ್ಯಾತ ನಟ ದಿವಂಗತ ಕಲ್ಯಾಣ್ ಕುಮಾರ್ ಅವರ ಸೊಸೆ ಪ್ರಿಯದರ್ಶಿನಿ ನಿಧನ ಹೊಂದಿದ್ದಾರೆ. ಕಲ್ಯಾಣ್ ಕುಮಾರ್ ಪುತ್ರ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯದರ್ಶಿನಿ ತನ್ನ ಪ್ಯಾಲಿಯೋ ಡಯಟ್ ನಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭರತ್ ಕಲ್ಯಾಣ್ ಸದ್ಯ ತಮಿಳು ಕಿರುತೆರೆಯಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. 43 ವರ್ಷದ ಪ್ರಿಯದರ್ಶಿನಿ ಕೆಲವು ವಾರಗಳ ಹಿಂದೆ ಕೋಮಾಗೆ ಜಾರಿದ್ದರು. ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆಚಿಕಿತ್ಸೆ ಫಲಕಾರಿಯಾಗದೆ  ಕೊನೆಯುಸಿರೆಳೆದಿದ್ದಾರೆ. ಇಂದು ಪ್ರಿಯದರ್ಶನಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ

ದಪ್ಪ ಇದ್ದ ಕಾರಣ ಪ್ರಿಯದರ್ಶನಿ ಡಯಲ್ ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಕೆಲವು ತಿಂಗಳ ಹಿಂದೆ ಪ್ಯಾಲಿಯೋ ಆಹಾರ ಕ್ರಮವನ್ನು ಅನುಸರಿಸುತ್ತಿದ್ದರು. ಡಯಟ್ ನಲ್ಲಿ ಹಠಾತ್ ಬದಲಾವಣೆಯಿಂದ ಅವರ ಮಧುಮೇಹ ಒಮ್ಮೆಗೆ ಏರಿಕೆಗೆ ಕಾರಣವಾಗಿತ್ತು. ಇದೇ ಪ್ರಿಯದರ್ಶನಿ ಅವರ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ.

ಮೂರು ತಿಂಗಳ ಹಿಂದೆ ಪ್ರಿಯದರ್ಶಿನಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಗಂಭೀರವಾಗಿತ್ತು ನಂತರ ಅವರು ಕೋಮಾಕ್ಕೆ ಹೋದರು. ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ಮತ್ತೆ ಪ್ರಜ್ಞೆಗೆ ಮರಳಲಿಲ್ಲ. ಅವರ ಪಾರ್ಥಿವ ಶರೀರವನ್ನು ಪ್ರಸ್ತುತ ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಕುಟುಂಬ ಮತ್ತು ಸ್ನೇಹಿತರ ಅಂತಿಮ ನಮನ ಸಲ್ಲಿಸಲು ಇರಿಸಲಾಗಿದೆ. ಪ್ರಿಯದರ್ಶಿನಿ ಅವರು ಭರತ್ ಕಲ್ಯಾಣ್  ದಂಪತಿಗೆ ಇಬ್ಬರು ಮಕ್ಕಳು. ಒಬ್ಬ ಮಗ ಮತ್ತು ಮಗಳನ್ನು ಅಗಲಿದ್ದಾರೆ.

ನಟ ಭರತ್, ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ ಕಲ್ಯಾಣ್ ಕುಮಾರ್ ಅವರ ಪುತ್ರ. ಭರತ್ ಕಲ್ಯಾಣ್ ನಟನಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು. ಆದರೆ ಸಿನಿಮಾ ಅಷ್ಟಾಗಿ ಕೈ ಹಿಡಿಯದ ಕಾರಣ ಕಿರುತೆರೆಗೆ ಎಂಟ್ರಿ ಕೊಟ್ಟರು.  ಕಿರುತೆರೆಯಲ್ಲಿ ಭರತ್ ಕಲ್ಯಾಣ್ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

SCROLL FOR NEXT