ಶ್ವೇತಾ ರೆಡ್ಡಿ 
ಸಿನಿಮಾ ಸುದ್ದಿ

ಕಾಂತಾರ ಸಿನಿಮಾದ ದೈವದ ವೇಷ ಹಾಕಿದ್ದ ಯುವತಿಯಿಂದ ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ

ಮೇಕಪ್​ ಆರ್ಟಿಸ್ಟ್​ ಆಗಿರುವ ಶ್ವೇತಾ ರೆಡ್ಡಿ ಕಾಂತಾರ ದೈವದ ವಿಡಿಯೋವನ್ನು ಶೂಟ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ರೀಲ್ಸ್ ಪೋಸ್ಟ್ ಮಾಡಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಬೆಂಗಳೂರು: ಮೇಕಪ್​ ಆರ್ಟಿಸ್ಟ್​ ಆಗಿರುವ ಶ್ವೇತಾ ರೆಡ್ಡಿ ಕಾಂತಾರ ದೈವದ ವಿಡಿಯೋವನ್ನು ಶೂಟ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ರೀತಿ ರೀಲ್ಸ್ ಪೋಸ್ಟ್ ಮಾಡಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಕಾಂತಾರ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ವೇಷ ಹಾಕಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ. ಡಿ.ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದಿದ್ದಾರೆ.

ಶ್ವೇತಾ ರೆಡ್ಡಿ

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊಂಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು ತಿಳಿಯಿತು. ಸಮಸ್ತ ದೈವಾ ರಾಧಕರಲ್ಲಿ ಹಾಗೂ ಜನತೆಯಲ್ಲಿ ದಯವಿಟ್ಟು ಕ್ಷಮಿಸಿ ಎಂದು ಕೇಳಿಕೊಳ್ಳುವುದಾಗಿ ತಿಳಿಸಿದರು.

ಕಾಂತಾರ ಸಿನಿಮಾ ಸುದ್ದಿಯಾಗುತ್ತಿದ್ದಂತೆ ಅದರಲ್ಲಿ ಬಂದಂತಹ ದೈವದ ವೇಷವನ್ನು ಇಮಿಟೇಟ್ ಮಾಡಿದ ಯುವತಿ ಈಗ ಅದಕ್ಕಾಗಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ತಪ್ಪು ಕಾಣಿಕೆ ಒಪ್ಪಿಸಿದ್ದಾರೆ. ನಾವು ಬೆಂಗಳೂರಿನವರು, ನಮಗೇನೂ ಗೊತ್ತಿಲ್ಲ, ತುಂಬಾ ಕಷ್ಟ ಆಗಿತ್ತು. ನೆಗೆಟಿವ್ ಕಾಮೆಂಟ್ಸ್ ಬರುತ್ತಿತ್ತು. ನಾವು ಬೆಂಗಳೂರಿನವರು. ನಮಗೆ ಇದರ ಬಗ್ಗೆ ಏನೂ ಗೊತ್ತಿಲ್ಲ. ಹಾಗಾಗಿ ಮುಂದೇನೂ ಆಗಬಾರದು ಎಂದು ದೇವಸ್ಥಾನಕ್ಕೆ ಬಂದು ತಪ್ಪು ಕಾಣಿಕೆ ಹಾಕಿದ್ದೇವೆ. ನಾವು ದೈವ ಯಕ್ಷಗಾನ ಎಲ್ಲವೂ ಒಂದೇ ಎಂದು ತಿಳಿದುಕೊಂಡಿದ್ದೆವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT