ಅವತಾರ್ 
ಸಿನಿಮಾ ಸುದ್ದಿ

ಕನ್ನಡದಲ್ಲೂ ಬರುತ್ತಿದೆ 'ಅವತಾರ್ ದಿ ವೇ ಆಫ್ ವಾಟರ್' ಸಿನಿಮಾ: ಟ್ರೇಲರ್ ಬಿಡುಗಡೆ ಮಾಡಿ ನಮಸ್ತೆ ಇಂಡಿಯಾ ಎಂದ ಹಾಲಿವುಡ್ ನಿರ್ಮಾಪಕ

ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.

ಬೆಂಗಳೂರು: ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.

ಹೌದು, ಕನ್ನಡಿಗರ ಒತ್ತಾಯಕ್ಕೆ ಮಣಿದಿರುವ ಚಿತ್ರದ ಭಾರತದಲ್ಲಿನ ಹಂಚಿಕೆದಾರರಾದ ‘20th ಸೆಂಚುರಿ ಸ್ಟುಡಿಯೋಸ್‌ ಇಂಡಿಯಾ’ ಕಂಪನಿ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಇದರಂತೆ ಪೂರ್ವಭಾವಿಯಾಗಿ ಚಿತ್ರದ ಕನ್ನಡ ಟ್ರೇಲರ್‌ನ್ನು ಇಂದು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ.

ಕಳೆದ ವಾರ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಅದರಲ್ಲಿ ಚಿತ್ರ ಡಿಸೆಂಬರ್ 16ಕ್ಕೆ ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಹಾಗೂ ಮಲೆಯಾಳಂನಲ್ಲಿ ಮಾತ್ರ ಬಿಡುಗಡೆಯಾಗುತ್ತದೆ ಎಂದು ತಿಳಿಸಲಾಗಿತ್ತು.

ಇದರ ಬೆನ್ನಲ್ಲೇ ಕನ್ನಡಿಗರು ಕೆಂಡ ಕಾರಿದ್ದರು. ಕರ್ನಾಟಕದಲ್ಲಿ ಅವತಾರ್‌ ಅನ್ನು ಕನ್ನಡದಲ್ಲೇ ಬಿಡುಗಡೆ ಮಾಡಬೇಕು, ಇಂತಹ ಬಹು ನಿರೀಕ್ಷಿತ ಸಿನಿಮಾವನ್ನು ಕನ್ನಡಿಗರು ಕನ್ನಡದಲ್ಲಿ ಏಕೆ ನೋಡಬಾರದು? ಮಲೆಯಾಳಂನಲ್ಲಿ ಅವಕಾಶವಿದ್ದು, ಕನ್ನಡಕ್ಕೆ ಏಕೆ ಅವಕಾಶವಿಲ್ಲ ಎಂದು ಪ್ರಶ್ನಿಸಿದ್ದರು. ಇದೀಗ ‘20th ಸೆಂಚುರಿ ಸ್ಟುಡಿಯೋಸ್‌ ಇಂಡಿಯಾ’ ಕಂಪನಿ ಕನ್ನಡದಲ್ಲಿ ಬಿಡುಗಡೆ ಮಾಡಲು ನಿರ್ಧರಿಸುವ ಹಿನ್ನೆಲೆಯಲ್ಲಿ ಅನೇಕ ಟ್ವೀಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.

ಹಾಲಿವುಡ್ ನಿರ್ಮಾಪಕ ಜಾನ್ ಲ್ಯಾಂಡೌ ಕೂಡ ಟ್ವೀಟ್ ಮಾಡಿದ್ದು, ನಮಸ್ತೆ ಇಂಡಿಯಾ, ನಾನು ಭಾರತದ ಬಹುಭಾಷಾ ಸಂಸ್ಕೃತಿಯನ್ನು ಗೌರವಿಸುತ್ತೇನೆ, ಆರು ಭಾಷೆಗಳಲ್ಲಿ ಅವತಾರ್ 2 ಬಿಡುಗಡೆಯಾಗುತ್ತಿದೆ. ಡಿಸೆಂಬರ್ 16ರಂದು ಪ್ಯಾಂಡೋರಗೆ ಬನ್ನಿ. ಈಗ ಹೊಚ್ಚಹೊಸ ಟ್ರೇಲರ್ ಅನ್ನು ನೋಡಿ ಮತ್ತು ಆನಂದಿಸಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?