ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಚಿತ್ರತಂಡ. 
ಸಿನಿಮಾ ಸುದ್ದಿ

'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರೀಕರಣ ಪೂರ್ಣಗೊಳಿಸಿದ ರಾಜ್ ಬಿ ಶೆಟ್ಟಿ

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ತಮ್ಮ ಮೂರನೇ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ತಮ್ಮ ಮೂರನೇ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ಚಿತ್ರೀಕರಣ ಪೂರ್ಣಗೊಂಡಿರುವ ಬಗ್ಗೆ ಅಧಿಕೃತ ಪೋಸ್ಟ್ ಅನ್ನು ಪ್ರೊಡಕ್ಷನ್ ಹೌಸ್, ಆಪಲ್ ಬಾಕ್ಸ್ ಸ್ಟುಡಿಯೋಸ್ ಪೋಸ್ಟ್ ಮಾಡಿದೆ.

ಸಿರಿ ರವಿಕುಮಾರ್

ಸ್ವಾತಿ ಮುತ್ತಿನ ಮಳೆ ಹನಿಯೇ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರ ಕಮ್ ಬ್ಯಾಕ್ ಚಿತ್ರವಾಗಬೇಕಿತ್ತು, ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಚಿತ್ರ ನಿರ್ಮಿಸಲು ರಮ್ಯಾ ಅವರು ನಿರ್ಧರಿಸಿದರು. ನಂತರ ಚಿತ್ರಕ್ಕೆ ನಟಿಯಾಗಿ ಸಿರಿ ರವಿಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು. ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ.

ಊಟಿ ಮತ್ತು ಮೈಸೂರು ಭಾಗಗಳಲ್ಲಿ ಚಿತ್ರದ ಚಿತ್ರೀಕರಣವನ್ನು ಮಾಡಲಾಯಿತು. 18 ದಿನಗಳ ಒಂದೇ ಶೆಡ್ಯೂಲ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. “ನಾವು ಸರಳವಾದ ಸ್ಥಳಗಳಲ್ಲಿಯೇ ಚಿತ್ರೀಕರಣ ನಡೆಸಲಾಗಿದ್ದು, ಹೀಗಾಗಿಯೇ ಅತ್ಯಂತ ಕಡಿಮೆ ಸ್ಥಳದಲ್ಲಿ ಚಿತ್ರೀಕರಣ ಪೂರ್ಣಗೊಳಿಸಲು ಸಾಧ್ಯವಾಯಿತು. ಸಮಸ್ಯೆಗಳು, ಗೊಂದಲಗಳಿದ್ದರೂ ನಾನು ಇಷ್ಟಪಟ್ಟ ಕೆಲಸವನ್ನು ನಾನು ಮಾಡಬಲ್ಲೆ ಎಂಬುದನ್ನು ಈ ಚಿತ್ರದ ಚಿತ್ರೀಕರಣದಲ್ಲಿ ತಿಳಿದುಕೊಂಡೆ ಎಂದು ರಾಜ್ ಬಿ ಶೆಟ್ಟಿಯವರು ಹೇಳಿದ್ದಾರೆ.

ಇದೇ ವೇಳೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಅಸಾಧಾರಣ ಅಭಿನಯವನ್ನು ನೀಡಿದ್ದಕ್ಕಾಗಿ ಸಿರಿ ರವಿಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಇದೀಗ ಪೋಸ್ಟ್-ಪ್ರೊಡಕ್ಷನ್‌ಗೆ ಹೋಗಲಿದೆ, ಚಿತ್ರಕ್ಕೆ ಒಟಿಟಿಯಲ್ಲಿ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುವ ನಂಬಿಕೆಯಿದೆ. ನೇರವಾಗಿ ಡಿಜಿಟಲ್ ಬಿಡುಗಡೆಗೆ ಹೋಗುವ ಕುರಿತು ಎಂದು ಪ್ರೊಡಕ್ಷನ್ ಹೌಸ್‌ನಿಂದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಚಿತ್ರದಲ್ಲಿ ರಾಜ್ ಮತ್ತು ಸಿರಿ ಅವರಲ್ಲದೆ, ಬಾಲಾಜಿ ಮನೋಹರ್, ಸೂರ್ಯ ವಸಿಷ್ಟ, ಮತ್ತು ರೇಖಾ ಕೂಡ್ಲಿಗಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಅವರ ಸಂಗೀತ ಮತ್ತು ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣವಿದೆ.

ಏತನ್ಮಧ್ಯೆ, ರಾಜ್ ಬಿ ಶೆಟ್ಟಿ ಅವರು ಫೆಬ್ರವರಿಯಲ್ಲಿ ಜಿಶೋ ಲೋನ್ ಆಂಥೋನಿ ಅವರ ಮಲಯಾಳಂ ಚೊಚ್ಚಲ ನಿರ್ದೇಶನದ ರುಧಿರಾಮ್ ಚಿತ್ರೀಕರಣವನ್ನು ಆರಂಭಿಸಲು ಚಿಂತನೆ ನಡೆಸಿದ್ದಾರೆ.

ಇನ್ನು ನಟಿ ರಮ್ಯಾ ಅವರು ರೋಹಿತ್ ಪದಕಿ ಅವರ ಉತ್ತರಕಾಂಡ ಚಿತ್ರದ ಮೂಲಕ ಸ್ಯಾಂಡಲ್ ವುಡ್'ಗೆ ಕಮ್ ಬ್ಯಾಕ್ ಆಗುತ್ತಿದ್ದು, ಚಿತ್ರದಲ್ಲಿ ಧನಂಜಯ್ ನಾಯಕ ನಟನಾಗಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT