ಸಿನಿಮಾ ಸುದ್ದಿ

ಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಬ್ರೈನ್ ಸ್ಟ್ರೋಕ್‌ನಿಂದ ಸಾವು

ಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಅವರು ಬ್ರೈನ್ ಸ್ಟ್ರೋಕ್‌ನಿಂದ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

ಕೋಲ್ಕತ್ತಾ: ಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಅವರು ಬ್ರೈನ್ ಸ್ಟ್ರೋಕ್‌ನಿಂದ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

ಐಂದ್ರಿಲಾ ಶರ್ಮಾ ಅವರಿಗೆ ನವೆಂಬರ್ 1 ರಂದು ಬ್ರೈನ್ ಸ್ಟ್ರೋಕ್ ಆಗಿದ್ದು, ಹೌರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 24 ವರ್ಷದ ನಟಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ ಐಂದ್ರಿಲಾ ಶರ್ಮಾ ಅವರು ಬಂಗಾಳಿಯ 'ಜಿಯೋನ್ ಕಥಿ', 'ಜುಮುರ್' ಮತ್ತು 'ಜಿಬಾನ್ ಜ್ಯೋತಿ' ಯಂತಹ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.

ಎರಡು ಬಾರಿ ಕ್ಯಾನ್ಸರ್ ನಿಂದ ಬದುಕುಳಿದಿದ್ದ ಐಂದ್ರಿಲಾ ಶರ್ಮಾ ಅವರು, ಕಷ್ಟಕರವಾದ ಶಸ್ತ್ರಚಿಕಿತ್ಸೆ ಮತ್ತು ಹಲವಾರು ರೌಂಡ್​​ ಕೀಮೋಥೆರಪಿಗೆ ಒಳಗಾಗಿದ್ದರು. ನಂತರ ಅವರು ಕ್ಯಾನ್ಸರ್ ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದರು.

ಕ್ಯಾನ್ಸರ್ ನಿಂದ ಚೇತರಿಸಿಕೊಂಡ ನಂತರ, ಐಂದ್ರಿಲಾ ತನ್ನ ಕೆಲಸವನ್ನು ಪುನರಾರಂಭಿಸಿದರು ಮತ್ತು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!