ಸಿನಿಮಾ ಸುದ್ದಿ

ಮೆಗಾಸ್ಟಾರ್ ಚಿರಂಜೀವಿಗೆ 2022 ನೇ ಸಾಲಿನ ವರ್ಷದ ಭಾರತೀಯ ಚಲನಚಿತ್ರ ವ್ಯಕ್ತಿ ಪ್ರಶಸ್ತಿ

Nagaraja AB

ಪಣಜಿ: ಖ್ಯಾತ ತೆಲುಗು ನಟ, ಮೆಗಾಸ್ಟರ್ ಚಿರಂಜೀವಿ 2022ನೇ ಸಾಲಿನ ಭಾರತೀಯ ಚಲನಚಿತ್ರ ವ್ಯಕ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗೋವಾದಲ್ಲಿ ಆರಂಭವಾದ 53ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಘೋಷಿಸಿದರು. ಆದರೆ, ಈ ಸಮಾರಂಭದಲ್ಲಿ ಚಿರಂಜೀವಿ ಪಾಲ್ಗೊಂಡಿರಲಿಲ್ಲ.

ಅನುರಾಗ್ ಠಾಕೂರ್ ತಮ್ಮ ಟ್ವೀಟರ್ ಖಾತೆಯಲ್ಲಿಯೂ ಚಿರಂಜೀವಿ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಈ ಅತ್ಯುನ್ನತ ಪ್ರಶಸ್ತಿ ದೊರೆತಿರುವುದರಿಂದ ಚಿರಂಜೀವಿ ಅಭಿಮಾನಿಗಳು ಅತೀವ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ.

ನಾಲ್ಕು ದಶಕಗಳ ಕಾಲ ಸಿನಿಮಾ ರಂಗದಲ್ಲಿರುವ 66 ವರ್ಷದ ಚಿರಂಜೀವಿ, 10 ಫಿಲಂಫೇರ್ ಪ್ರಶಸ್ತಿ, ನಾಲ್ಕು ನಂದಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. 

SCROLL FOR NEXT