ನಾಗ ಶೌರ್ಯ - ಅನುಷಾ ಶೆಟ್ಟಿ ವಿವಾಹ 
ಸಿನಿಮಾ ಸುದ್ದಿ

ಕನ್ನಡತಿ ಅನುಷಾ ಶೆಟ್ಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಜೊತೆ ನಟಿಸಿದ್ದ ನಟ ನಾಗ ಶೌರ್ಯ!

ತೆಲುಗಿನ ಖ್ಯಾತ ನಟ ನಾಗ ಶೌರ್ಯ ಇತ್ತೀಚೆಗಷ್ಟೇ ಬೆಂಗಳೂರು ಮೂಲದ ಕನ್ನಡತಿ ಅನುಷಾ ಶೆಟ್ಟಿ ಅವರನ್ನು ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

ತೆಲುಗಿನ ಖ್ಯಾತ ನಟ ನಾಗ ಶೌರ್ಯ ಇತ್ತೀಚೆಗಷ್ಟೇ ಬೆಂಗಳೂರು ಮೂಲದ ಕನ್ನಡತಿ ಅನುಷಾ ಶೆಟ್ಟಿ ಅವರನ್ನು ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು. ಇಂದು ನವೆಂಬರ್ 20 ರಂದು ಬೆಂಗಳೂರಿನ ಪಂಚತಾರಾ ಹೋಟೆಲ್‌ನಲ್ಲಿ ನಡೆದ ವಿವಾಹದ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಕುಂದಾಪುರ ಮೂಲದವರಾದ ಅನುಷಾ ಬೆಂಗಳೂರಿನಲ್ಲಿ ಇಂಟೀರಿಯರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾರೆ. ತಮ್ಮದೇ ಸಂಸ್ಥೆಯನ್ನ ಕೂಡ ತೆರೆದಿದ್ದಾರೆ.

ಬೆಂಗಳೂರಿನ ವಿಟ್ಟಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯು ಮ್ಯಾರಿಯಟ್ ಹೋಟೆಲ್‌ನಲ್ಲಿ ನಾಗ ಶೌರ್ಯ ಮತ್ತು ಅನುಷಾ ಶೆಟ್ಟಿ ಅವರ ಮದುವೆ ಸಮಾರಂಭ ನಡೆದಿದೆ. ಸಮಾರಂಭದಲ್ಲಿ ಎರಡೂ ಕುಟುಂಬದವರು ಮತ್ತು ಆಪ್ತರು ಪಾಲ್ಗೊಂಡಿದ್ದರು.

ಮದುವೆಯ ಪೂರ್ವ ಕಾರ್ಯಕ್ರಮಗಳು ನಿನ್ನೆ ನವೆಂಬರ್ 19 ರಂದು ಮೆಹೆಂದಿ ಮತ್ತು ಕಾಕ್ಟೈಲ್ ಪಾರ್ಟಿಯೊಂದಿಗೆ ಪ್ರಾರಂಭವಾಯಿತು. ವಿವಾಹ ಬೆಂಗಳೂರಿನಲ್ಲಿ ನಡೆದಿದ್ದು, ಆರತಕ್ಷತೆ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನಡೆಯಲಿದೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ನಾಗ ಶೌರ್ಯ ಅಭಿನಯದ ಕೃಷ್ಣ ವೃಂದ ವಿಹಾರಿ ಸಿನಿಮಾ ಬಿಡುಗಡೆಯಾಗಿತ್ತು. ಸದ್ಯ ಅವರು ತಮ್ಮ 24 ನೇ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, NS24 ಎಂದು ಹೆಸರಿಡಲಾಗಿದೆ. ಎಸ್ಎಸ್ ಅರುಣಾಚಲಂ ಅವರು ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶಿಸುತ್ತಿದ್ದಾರೆ. 2018ರಲ್ಲಿ ತೆರೆಕಂಡ ಚಲೋ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಜೊತೆಗೆ ನಾಗ ಶೌರ್ಯ ನಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ