ನವೀನ್ ಡಿ ಪಡೀಲ್ 
ಸಿನಿಮಾ ಸುದ್ದಿ

ಶೂಟಿಂಗ್​ ವೇಳೆ ಅವಘಡ: ಕಾಂತಾರ ಸಿನಿಮಾ ನಟ ನವೀನ್ ಡಿ. ಪಡೀಲ್ ಆಸ್ಪತ್ರೆಗೆ ದಾಖಲು

ಶೂಟಿಂಗ್ ವೇಳೆ ಸಂಭವಿಸಿದ ಅವಘಡದಲ್ಲಿ ಕಾಂತಾರ ಚಿತ್ರದ ಪಾತ್ರದಾರಿ, ತುಳು ಚಿತ್ರರಂಗದ ಖ್ಯಾತ ನಟ ನವೀನ್ ಡಿ ಪಡೀಲ್ ಅವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳೂರು: ಶೂಟಿಂಗ್ ವೇಳೆ ಸಂಭವಿಸಿದ ಅವಘಡದಲ್ಲಿ ಕಾಂತಾರ ಚಿತ್ರದ ಪಾತ್ರದಾರಿ, ತುಳು ಚಿತ್ರರಂಗದ ಖ್ಯಾತ ನಟ ನವೀನ್ ಡಿ ಪಡೀಲ್ ಅವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಶೂಟಿಂಗ್ ವೇಳೆ ನವೀನ್ ತೊಡೆಯ ಮೂಳೆ ಮುರಿದು ಹೋಗಿದೆ. ಹೀಗಾಗಿ  ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಹೀಗಾಗಿ ಅವರನ್ನು ಮೂರು ತಿಂಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ನೆಚ್ಚಿನ ನಟ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. 

ಸದ್ಯ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ನವೀನ್ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ನಡೆದ ಶೂಟಿಂಗ್ ವೇಳೆ ಈ ಅವಘಡ ಸಂಭವಿಸಿದೆ. 

ಮಜಾ ಟಾಕೀಸ್ ನ ಗುಂಡು ಮಾಮಾ ಎಂದೇ ಖ್ಯಾತರಾಗಿದ್ದ ನವೀನ್ ಅವರು ಹಾಸ್ಯ ಕಲಾವಿದರಾಗಿ ಸಾಕಷ್ಟು ಹೆಸರು ಮಾಡಿದ್ದಾರೆ. ತುಳು ಹಾಗೂ ಹಲವು ಕನ್ನಡದ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video