ಸಿನಿಮಾ ಸುದ್ದಿ

ಕನ್ನಡದ ಪ್ರಸಿದ್ಧ ನಟ ದ್ವಾರಕೀಶ್ ಸೇರಿದಂತೆ ಮೂವರಿಗೆ ಗೌರವ ಡೌಕ್ಟರೇಟ್

Shilpa D

ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಸೇರಿದಂತೆ ಮೂವರಿಗೆ ಬೆಂಗಳೂರು ವಿವಿ ಡಾಕ್ಟರೇಟ್ ಘೋಷಿಸಿದೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

1964ರಲ್ಲಿ 'ವೀರಸಂಕಲ್ಪ' ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬಂದ ದ್ವಾರಕೀಶ್ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿರುವ ದ್ವಾರಕೀಶ್, 15ಕ್ಕೂ ಹೆಚ್ಚು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ದ್ವಾರಕೀಶ್ ಅವರದ್ದು. ಇನ್ನು ಹಾಸ್ಯ ಕಲಾವಿದರಾಗಿ, ನಾಯಕ ನಟನಾಗಿ ನೂರಾರು ಸಿನಿಮಾಗಳಲ್ಲಿ ದ್ವಾರಕೀಶ್ ನಟಿಸಿದ್ದಾರೆ. ಕೊಂಚ ಕುಬ್ಜರಾಗಿರುವ ದ್ವಾರಕೀಶ್ ಅವರನ್ನು ಕುಳ್ಳ ದ್ವಾರಕೀಶ್ ಎಂತಲೇ ಕರೆಯುತ್ತಾರೆ. ಕನ್ನಡ ಮಾತ್ರವಲ್ಲ ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.

ಚಿತ್ರನಟ ಬಿ.ಎಸ್‌. ದ್ವಾರಕೀಶ್‌, ಕಲಾವಿದ ಡಾ.ಟಿ. ಅನಿಲ್‌ ಕುಮಾರ್‌ ಮತ್ತು ಅಮೆರಿಕದ ಕನ್ನಡ ಕೂಟಗಳ ಸಂಘಟನೆ (ಅಕ್ಕ) ಅಧ್ಯಕ್ಷ ಅಮರನಾಥ್‌ ಗೌಡ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಲು ನಿರ್ಧರಿಸಲಾಗಿದೆ.

SCROLL FOR NEXT