ಮೀನಾ 
ಸಿನಿಮಾ ಸುದ್ದಿ

ಪತಿ ಸತ್ತು ವರ್ಷ ತುಂಬುವುದರೊಳಗೆ ಎರಡನೇ ವಿವಾಹಕ್ಕೆ ಮೀನಾ ಸಜ್ಜು! ಕುಟುಂಬಸ್ಥರ ಒತ್ತಡಕ್ಕೆ ಮಣಿದರಾ ಬಹುಭಾಷಾ ನಟಿ?

ಬಹುಭಾಷಾ ನಟಿ ಮೀನಾ ಎರಡನೇ ಮದುವೆಗೆ ಸಜ್ಜಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ. ಅವರ ಕುಟುಂಬದಿಂದಲೇ ಮೀನಾ ಅವರಿಗೆ ಎರಡನೇ ಮದುವೆಯಾಗು ಎಂಬ ಒತ್ತಡ ಶುರುವಾಗಿದೆ. ಹೀಗಾಗಿ ಅವರು ಎರಡನೇ ಮದುವೆಗೆ ತಯಾರಾಗಿದ್ದಾರೆ ಎನ್ನಲಾಗಿದೆ.

ಬಹುಭಾಷಾ ನಟಿ ಮೀನಾ ಎರಡನೇ ಮದುವೆಗೆ ಸಜ್ಜಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ. ಅವರ ಕುಟುಂಬದಿಂದಲೇ ಮೀನಾ ಅವರಿಗೆ ಎರಡನೇ ಮದುವೆಯಾಗು ಎಂಬ ಒತ್ತಡ ಶುರುವಾಗಿದೆ. ಹೀಗಾಗಿ ಅವರು ಎರಡನೇ ಮದುವೆಗೆ ತಯಾರಾಗಿದ್ದಾರೆ ಎನ್ನಲಾಗಿದೆ.

2009ರಲ್ಲಿ ನಟಿ ಮೀನಾ ಸಾಫ್ಟ್‌ವೇರ್‌ ಇಂಜಿನಿಯರ್‌ ವಿದ್ಯಾಸಾಗರ್​ ಅವರನ್ನು ವರಿಸಿದ್ದರು. ವಿವಾಹದ ಬಳಿಕ ವಿದ್ಯಾಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು. ಕಳೆದ ಜೂನ್​ನಲ್ಲಿ ಪತಿ ವಿದ್ಯಾ ಸಾಗರ್ ಕೊರೊನೋತ್ತರ ಸಮಸ್ಯೆಗಳಿಂದ ಸಾವನ್ನಪ್ಪಿದ್ದರು.

ಈ ದಂಪತಿಗೆ 11 ವರ್ಷದ ನೈನಿಕಾ ಎಂಬ ಮಗಳಿದ್ದಾಳೆ. ತಾಯಿಯ ಹಾದಿಯನ್ನ ಅನುಸರಿಸಿರುವ ನೈನಿಕಾ ‘ತೇರಿ’ ಎಂಬ ಚಿತ್ರದಲ್ಲಿ ಬಾಲನಟಿಯಾಗಿ ತೆರೆಯ ಮೇಲೆ ಪದಾರ್ಪಣೆ ಮಾಡಿದ್ದಾರೆ. ಇನ್ನೂ ಪತಿ ಕಳೆದುಕೊಂಡ ಕಹಿ ಸತ್ಯವನ್ನು ಒಪ್ಪಿಕೊಳ್ಳುತ್ತಿರುವ ಮೀನಾ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದ್ದಾರೆ.

ಹೊಸ ಸಿನಿಮಾದಲ್ಲಿ ನಟಿಸುತ್ತಿರುವ ಮೀನಾ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ತಮ್ಮ ಕುಟುಂಬದ ಸ್ನೇಹಿತರೊಬ್ಬರನ್ನ ಮರು ವಿವಾಹ ಮಾಡಿಕೊಳ್ಳುವಂತೆ ಪೋಷಕರು ಒತ್ತಡ ಹೇರುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel