ಅಭಿಷೇಕ್ ಅಂಬರೀಷ್ 
ಸಿನಿಮಾ ಸುದ್ದಿ

'ಬ್ಯಾಡ್ ಮ್ಯಾನರ್ಸ್' ನಲ್ಲಿ ಅಭಿಷೇಕ್ ಅಂಬರೀಷ್ ಗೆ 'ರುದ್ರ' ಪೊಲೀಸ್ ಅಧಿಕಾರಿ ಪಾತ್ರ

ಅಭಿಷೇಕ್ ಅಂಬರೀಷ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರ ತಂಡ ಟೀಸರ್ ರಿಲೀಸ್ ಮಾಡಿದೆ.  ಇದೊಂದು ಆ್ಯಕ್ಷನ್ ಪ್ಯಾಕ್ಡ್ ಫಿಲ್ಮ್ ಆಗಿದ್ದು, ಟೀಸರ್ ರಿಲೀಸ್ ಆದ ಕೆಲವೆ ಗಂಟೆಗಳಲ್ಲಿ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದಿದೆ.

ಅಭಿಷೇಕ್ ಅಂಬರೀಷ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರ ತಂಡ ಟೀಸರ್ ರಿಲೀಸ್ ಮಾಡಿದೆ.  ಇದೊಂದು ಆ್ಯಕ್ಷನ್ ಪ್ಯಾಕ್ಡ್ ಫಿಲ್ಮ್ ಆಗಿದ್ದು, ಟೀಸರ್ ರಿಲೀಸ್ ಆದ ಕೆಲವೆ ಗಂಟೆಗಳಲ್ಲಿ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದಿದೆ.

ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಅಭಿಷೇಕ್ ಅಂಬರೀಷ್ ರುದ್ರ ಎಂಬ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ರಚಿತಾ ರಾಮ್ ಮತ್ತು ಪ್ರಿಯಾಂಕಾ ಕುಮಾರ್ ಕೂಡ ನಟಿಸಿದ್ದಾರೆ.

ದುನಿಯಾ, ಟಗರು, ಮತ್ತು ಪಾಪ್‌ಕಾರ್ನ್ ಮಂಕಿ ಟೈಗರ್ ಚಿತ್ರಗಳಿಗೆ ಹೆಸರುವಾಸಿಯಾಗಿರುವ ಸೂರಿ ಅವರ ಮುಂಬರುವ ಚಿತ್ರವು ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಬ್ಯಾಡ್ ಮ್ಯಾನರ್ಸ್‌ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.  ಕೆಲವು ಪ್ಯಾಚ್‌ವರ್ಕ್ ದೃಶ್ಯಗಳನ್ನು ಚಿತ್ರೀಕರಿಸಬೇಕಾಗಿದೆ. ಇಂಟ್ರೋ ಟ್ರ್ಯಾಕ್ ಅನ್ನು ಧನು ಕೊರಿಯೋಗ್ರಫಿ  ಮಾಡಲಿದ್ದು, ಅಕ್ಟೋಬರ್ 10 ರಿಂದ ಚಿತ್ರೀಕರಣ ನಡೆಯಲಿದೆ.

ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಬ್ಯಾಡ್ ಮ್ಯಾನರ್ಸ್ ಚಿತ್ರಕ್ಕೆ ಶೇಖರ್ ಎಸ್ ಅವರ ಛಾಯಾಗ್ರಹಣವಿದೆ. ಏತನ್ಮಧ್ಯೆ, ಅಭಿಷೇಕ್ ನಿರ್ದೇಶಕ ಕೃಷ್ಣ ಅವರ ಮುಂಬರುವ ಚಿತ್ರ ಕಾಲಿಗೆ ಸಜ್ಜಾಗುತ್ತಿದ್ದಾರೆ, ಇದು ನವೆಂಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲಿದೆ. 

ನಿರ್ದೇಶಕ ಮಹೇಶ್ ಕುಮಾರ್ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರೊಂದಿಗೆ ತಾತ್ಕಾಲಿಕವಾಗಿ AA04 ಎಂದು ಹೆಸರಿಸಲಾದ ಚಿತ್ರದಲ್ಲೂ ನಟಿಸುತ್ತಿದ್ದಾರೆ, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹತ್ವದ ಆದೇಶ: ಅಗತ್ಯವಿದ್ದರೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿ!

ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಬ್ರೇಕ್: ಮೇ 20 ರಿಂದ ಮುಷ್ಕರ ನಡೆಸದಂತೆ ನಿರ್ಬಂಧ

ಡೊನಾಲ್ಡ್ ಟ್ರಂಪ್, ನೆತನ್ಯಾಹು ಹತ್ಯೆಗೆ ಭಾರಿ ಸ್ಕೆಚ್: $58 ಮಿಲಿಯನ್ ಬಹುಮಾನ ನೀಡಲು ಇರಾನ್ ಪ್ಲಾನ್!

ತುಮಕೂರಿನಲ್ಲಿ ಸಾಧನಾ ಸಮಾವೇಶ: ಇತ್ತ ಸಾಹುಕಾರ್ ಮನೆಯಲ್ಲಿ ಸಿಎಂ ಆಪ್ತರ ಬ್ರೇಕ್ ಫಾಸ್ಟ್ ಮೀಟಿಂಗ್

ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ: ಕಂಜನ್ ದಾಳಿಯಿಂದ ಗಾಯಗೊಂಡಿದ್ದ 'ಮಾರ್ತಾಂಡ' ಸಾವು!

SCROLL FOR NEXT