ಅವಳಿ ಗಂಡು ಮಕ್ಕಳ ಕಾಲಿಗೆ ಮುತ್ತಿಕ್ಕುತ್ತಿರುವ ದಂಪತಿ 
ಸಿನಿಮಾ ಸುದ್ದಿ

ಮದುವೆಯಾದ 4 ತಿಂಗಳಿಗೆ ಅವಳಿ ಗಂಡು ಮಕ್ಕಳ ತಾಯಿಯಾದ ನಯನತಾರಾ!

ಕಳೆದ ಜೂನ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರಿಗೆ ಅವಳಿ ಗಂಡು ಮಕ್ಕಳಾಗಿವೆ. ನವಜಾತ ಶಿಶುಗಳೊಂದಿಗೆ ತಾರಾ ದಂಪತಿಗಳಿರುವ ಚಿತ್ರವನ್ನು ಶಿವನ್ ಅವರು ಟ್ವೀಟ್ ಮಾಡಿದ್ದಾರೆ.

ಕಳೆದ ಜೂನ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರಿಗೆ ಅವಳಿ ಗಂಡು ಮಕ್ಕಳಾಗಿವೆ. ನವಜಾತ ಶಿಶುಗಳೊಂದಿಗೆ ತಾರಾ ದಂಪತಿಗಳಿರುವ ಚಿತ್ರವನ್ನು ಶಿವನ್ ಅವರು ಟ್ವೀಟ್ ಮಾಡಿದ್ದಾರೆ.

ಅವಳಿ ಮಕ್ಕಳಿಗೆ ಉಯಿರ್(ಜೀವನ ಎಂದರ್ಥ) ಮತ್ತು ಉಲಗಮ್(ಅಂದರೆ ಪ್ರಪಂಚ) ಎಂದು ನಾಮಕರಣ ಮಾಡಿದ್ದಾರೆ.

"ನಯನಾ ಮತ್ತು ನಾನು ಅಮ್ಮ, ಅಪ್ಪ ಆಗಿದ್ದೇವೆ. ನಾವು ಅವಳಿ ಗಂಡು ಮಕ್ಕಳಾಗಿವೆ. ನಮ್ಮೆಲ್ಲರ ಪ್ರಾರ್ಥನೆಗಳು, ನಮ್ಮ ಪೂರ್ವಜರ ಆಶೀರ್ವಾದ ಮತ್ತು ಎಲ್ಲ ಶುಭಕೋರಿಕೆಯಿಂದ ಆಶೀರ್ವಾದದ ರೂಪದಲ್ಲಿ ಅವಳಿ ಮಕ್ಕಳು ಬಂದಿದ್ದಾರೆ. ನಮ್ಮ ಮಕ್ಕಳಾದ ಉಯಿರ್ ಮತ್ತು ಉಲಗಮ್ ಗೆ ನಿಮ್ಮೆಲ್ಲರ ಆಶೀರ್ವಾದ ಬೇಕು" ಎಂದು ನಿರ್ದೇಶಕ ಶಿವನ್ ಟ್ವೀಟ್ ಮಾಡಿದ್ದಾರೆ.

ಕಳೆದ ಜೂನ್ 9 ರಂದು ನಯನತಾರಾ ಮತ್ತು ಶಿವನ್ ತಮಿಳುನಾಡಿನ ಮಹಾಬಲಿಪುರಂನ ಪಂಚತಾರಾ ಹೋಟೆಲ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ತಾರಾ ದಂಪತಿ ಮದುವೆಯಾದ ನಾಲ್ಕು ತಿಂಗಳಿಗೆ ಅವಳಿ ಗಂಡು ಮಕ್ಕಳನ್ನು ಬರಮಾಡಿಕೊಂಡಿದ್ದಾರೆ. ಅವರ ವಿವಾಹದಲ್ಲಿ ರಜನಿಕಾಂತ್, ಕಮಲ್ ಹಾಸನ್, ಚಿರಂಜೀವಿ, ಶಾರುಖ್ ಖಾನ್, ಸೂರ್ಯ, ಅಜಿತ್, ಕಾರ್ತಿ, ವಿಜಯ್ ಸೇತುಪತಿ ಮತ್ತು ಸಮಂತಾ ರುತ್ ಪ್ರಭು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT