ಧೂಮಂ ಸಿನಿಮಾ ಮೂಹೂರ್ತ 
ಸಿನಿಮಾ ಸುದ್ದಿ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಫಹಾದ್‌–ಪವನ್‌ ಕುಮಾರ್ ಜೋಡಿಯ ‘ಧೂಮಂ’ ಚಿತ್ರೀಕರಣ ಆರಂಭ

ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶನದಲ್ಲಿ ಬಹುಭಾಷಾ ತಾರೆ ಫಹಾದ್‌ ಫಾಸಿಲ್ ನಟಿಸುತ್ತಿರುವ ‘ಧೂಮಂ’ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ.

ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶನದಲ್ಲಿ ಬಹುಭಾಷಾ ತಾರೆ ಫಹಾದ್‌ ಫಾಸಿಲ್ ನಟಿಸುತ್ತಿರುವ ‘ಧೂಮಂ’ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ. ಫಹಾದ್ ಫಾಸಿಲ್ ಹಾಗೂ ಅಪರ್ಣ ಬಾಲಮುರಳಿ ಜೋಡಿಯಾಗಿ ನಟಿಸುತ್ತಿರುವ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

ಧೂಮಂ ಸಿನಿಮಾ ಶೂಟಿಂಗ್ ಆರಂಭವಾಗಿರುವ ಬಗ್ಗೆ ಹೊಂಬಾಳೆ ನಿರ್ಮಾಣ ಸಂಸ್ಥೆ ಟ್ವಿಟ್ಟರ್ ನಲ್ಲಿ ಅಧಿಕೃತ ಘೋಷಣೆ ಮಾಡಿದೆ. ಕೆಜಿಎಫ್ , ಕಾಂತಾರ ದಂತಹ ಅದ್ಭುತ ಚಿತ್ರವನ್ನ ನಿರ್ಮಾಣ ಮಾಡಿರುವ ಹೊಂಬಾಳೆ ಬ್ಯಾನರ್‌ನಲ್ಲಿ ‘ಧೂಮಂ’ ಸಿನಿಮಾ ಮೂಡಿ ಬರುತ್ತಿದೆ. ʼಪುಷ್ಪʼ ಸ್ಟಾರ್ ಫಹಾದ್ ಫಾಸಿಲ್‌ಗೆ ಪವನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಚಿತ್ರತಂಡ ಸಜ್ಜಾಗಿದೆ. ಸದ್ಯ ಧೂಮ್ ಚಿತ್ರಕ್ಕೆ ಚಾಲನೆ ಸಿಕ್ಕಿದೆ.

"ಫಹಾದ್ ಮತ್ತು ಅಪರ್ಣಾ ಅವರು ನಮ್ಮ ನಿರ್ಮಾಣ ಸಂಸ್ಥೆಯ ಸಿನಿಮಾಗೆ ಜೊತೆಯಾಗಿರುವುದು ಸಂತಸ ತಂದಿದೆ, ಧೂಮಂ ಸಾಂಪ್ರದಾಯಿಕ ಸಿನಿಮಾದ ಎಲ್ಲಾ ಪ್ರಕಾರಗಳಿಗಿಂತ ವಿಭಿನ್ನವಾದ ವಿಶಿಷ್ಟವಾದ ಕಥಾಹಂದರವನ್ನು ಹೊಂದಿದೆ. ನಿರ್ದೇಶಕ ಪವನ್ ಕುಮಾರ್ ಹಲವಾರು ತಿಂಗಳುಗಳ ಕಾಲ ಸ್ಕ್ರಿಪ್ಟ್‌ನಲ್ಲಿ ಕೆಲಸ ಮಾಡಿದ್ದಾರೆ, ಅಭಿಮಾನಿಗಳು ಸಿನಿಮಾವನ್ನು ಖಂಡಿತಾ ಇಷ್ಟಪಡುತ್ತಾರೆ ಎಂದು ವಿಜಯ ಕಿರಂಗದೂರು ತಿಳಿಸಿದ್ದಾರೆ.

'ಧೂಮಂ', ಥ್ರಿಲ್ಲರ್, ಮಲಯಾಳಂ, ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ 4 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಫಹದ್ ಮತ್ತು ಅಪರ್ಣಾ ಅವರಲ್ಲದೆ, ಅಚ್ಯುತ್ ಕುಮಾರ್, ಜಾಯ್ ಮ್ಯಾಥ್ಯೂ, ದೇವ್ ಮೋಹನ್, ಅನು ಮೋಹನ್ ಮತ್ತು ನಂದು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು "ಕೆಜಿಎಫ್" ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಆಗಮಿಸಿ ಶುಭ ಕೋರಿದರು. ಮುಂದಿನ ತಿಂಗಳಿನಿಂದ "ಧೂಮಂ" ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಪ್ರೀತಾ ಜಯರಾಮನ್ ಛಾಯಾಗ್ರಹಣ "ಧೂಮಂ" ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT