ಪುನೀತ್ ಪರ್ವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿಗೆ ಡಾ ರಾಜ್ ಕುಮಾರ್ ಕುಟುಂಬದಿಂದ ಆಹ್ವಾನ 
ಸಿನಿಮಾ ಸುದ್ದಿ

ಅಕ್ಟೋಬರ್ 21ಕ್ಕೆ ಅರಮನೆ ಮೈದಾನದಲ್ಲಿ 'ಪುನೀತ್ ಪರ್ವ' ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್; ಗಣ್ಯರು ಭಾಗಿ

ಡಾ‌. ಪುನಿತ್ ರಾಜಕುಮಾರ ಅಭಿನಯದ, ಅಪ್ಪು ಡ್ರೀಮ್ ಪ್ರಾಜೆಕ್ಟ್  ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್(ಬಿಡುಗಡೆ ಪೂರ್ವ ಕಾರ್ಯಕ್ರಮ)ನ್ನು ಅದ್ದೂರಿಯಾಗಿ ನಡೆಸಲು ಡಾ ರಾಜ್ ಕುಮಾರ್ ಕುಟುಂಬ ನಿರ್ಧರಿಸಿದೆ.

ಬೆಂಗಳೂರು: ಡಾ‌. ಪುನಿತ್ ರಾಜಕುಮಾರ ಅಭಿನಯದ, ಅಪ್ಪು ಡ್ರೀಮ್ ಪ್ರಾಜೆಕ್ಟ್  ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್ (ಬಿಡುಗಡೆ ಪೂರ್ವ ಕಾರ್ಯಕ್ರಮ)ನ್ನು ಅದ್ದೂರಿಯಾಗಿ ನಡೆಸಲು ಡಾ ರಾಜ್ ಕುಮಾರ್ ಕುಟುಂಬ ನಿರ್ಧರಿಸಿದೆ.

ಅಕ್ಟೋಬರ್ 21ರಂದು ಸಾಯಂಕಾಲ ಅರಮನೆ ಮೈದಾನದಲ್ಲಿ ಅಪ್ಪು ಪುನೀತ ಪರ್ವ ಕಾರ್ಯಕ್ರಮ ನಡೆಯಲಿದ್ದು ಒಂದು ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. 

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ಸಿನಿಮಾತಂಡ ಹಾಗೂ ಕುಟುಂಬ ನಿರ್ಧರಿಸಿದೆ. ಹಾಗಾಗಿ ಇಡೀ ಕುಟುಂಬ ತೆರಳಿ ಸಿಎಂ ಅವರಿಗೆ ಆಹ್ವಾನ ನೀಡಿದೆ. ಪುನೀತ್ ಪರ್ವ ಎನ್ನುವ ಹೆಸರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಅಪ್ಪು ಇಲ್ಲದೇ ಅವರ ನೆನಪಿನಲ್ಲಿ ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಕೊನೆಯ ಬಾರಿಗೆ ಪುನೀತ್ ರಾಜ್ ಕುಮಾರ್ ಅವರನ್ನು ತೆರೆಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಪ್ರೀ ರಿಲೀಸ್ ಈವೆಂಟ್‌ಗೆ ಸಿಎಂ ಸೇರಿದಂತೆ ಅನೇಕ ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ರಾಜಕೀಯ ಜೊತೆಗೆ ಅನೇಕ ಸಿನಿ ಗಣ್ಯರು ಸಹ ಅಪ್ಪು ಕೊನೆಯ ಸಿನಿಮಾದ ಈವೆಂಟ್ ನಲ್ಲಿ ಭಾಗಿಯಾಗಲಿದ್ದಾರೆ. 

ಕನ್ನಡ ಸಿನಿಮಾ ಗಣ್ಯರು ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಗಣ್ಯರು ಪ್ರೀ ರಿಲೀಸ್ ಈವೆಂಟ್‌ನಲ್ಲಿ ಇರಲಿದ್ದಾರೆ ಸಿಎಂ ಭೇಟಿಯ ಬಳಿಕ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, 'ಅಕ್ಟೋಬರ್ 21 ಗಂಧದ ಗುಡಿ  ಪ್ರೀ ರೀಲೀಸ್ ಈವೆಂಟ್ ಇದೆ. ಈ ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ಕೊಡಲು ಬಂದಿದ್ದೇವೆ. ಸೌತ್ ಇಂಡಿಯನ್ ಸ್ಟಾರ್ಸ್ ಗಳನ್ನ ಅಹ್ವಾನ ನೀಡಿದ್ದೇವೆ. ಅವರಿನ್ನೂ ಭಾಗವಹಿಸುವ ಬಗ್ಗೆ ದೃಢಪಡಿಸಿಲ್ಲ. ಇನ್ನೂ ಕಾರ್ಯಕ್ರಮದ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡಯಲಿದೆ.  ಇದಕ್ಕೆ ಪುನೀತ್ ಪರ್ವ ಎಂದು ಹೆಸರಿಡಲಾಗಿದೆ. ಅಕ್ಟೋಬರ್ 28 ಕ್ಕೆ ಗಂಧದ ಗುಡಿ ಸಿನಿಮಾ ರಿಲೀಸ್ ಆಗಲಿದೆ. ಪುನಿತ್ ಸಾಕಷ್ಟು ಇಷ್ಟ ಪಟ್ಟು ಮಾಡಿದ ಕೊನೆ ಸಿನಿಮಾ ಇದು ಎಂದು ಹೇಳಿದರು. 

ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾದ ಗಂಧದ ಗುಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅವರನ್ನು ಕೊನೆಯ ಬಾರಿಗೆ ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT