ಪುನೀತ್ ರಾಜಕುಮಾರ್-ಸಿಎಂ ಬೊಮ್ಮಾಯಿ 
ಸಿನಿಮಾ ಸುದ್ದಿ

ನವೆಂಬರ್ 1 ರಂದು ಪುನೀತ್ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ಸ್ಯಾಂಡಲ್ವುಡ್ ಪವರ್ ಸ್ಟಾರ್, ದಿ. ಪುನೀತ್ ರಾಜ್​ಕುಮಾರ್ ಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್, ದಿ. ಪುನೀತ್ ರಾಜ್​ಕುಮಾರ್ ಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕುರಿತಂತೆ ಸಭೆ ನಡೆದಿತ್ತು. ನಂತರ ಮಾಧ್ಯಮದವರೊಂದಿಗೆ ಸಿಎಂ ಬೊಮ್ಮಾಯಿ, ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ. ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ ಎಂದರು.

ನವೆಂಬರ್ 1ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ನವೆಂಬರ್ 1ರ ನಂತರ ಬೆಂಗಳೂರಿನಲ್ಲಿ 10 ದಿನಗಳ ಅಂತರದಲ್ಲಿ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ರಾಜ್‌ಕುಮಾರ್ ಕುಟುಂಬದ ಸದಸ್ಯರು ಸಹ ಇಂದಿನ ಸಭೆಯಲ್ಲಿ ಭಾಗಿಯಾಗಿದ್ದರು. ನವೆಂಬರ್ 1ರ ಸಂಜೆ 4 ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯಲಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video