ರಜನಿಕಾಂತ್ ಭೇಟಿ ಮಾಡಿದ ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

'ನೀವು ಒಂದ್ ಸಲ ಹೊಗಳಿದ್ರೆ...' ರಜನಿಕಾಂತ್ ಭೇಟಿ ಬಳಿಕ ರಿಷಬ್ ಶೆಟ್ಟಿ ಹೇಳಿದ್ದೇನು?

ರಿಷಬ್ ಶೆಟ್ಟಿ ನಿರ್ಮಾಣದ ಕನ್ನಡದ ಸಿನಿಮಾ ‘ಕಾಂತಾರ’ವನ್ನು ನೋಡಿ ಸೂಪರ್ ಸ್ಟಾರ್ ರಜನಿಕಾಂತ್‌ ಮನಸಾರೆ ಹೊಗಳಿದ್ದರು. ಈ ಹಿನ್ನೆಲೆಯಲ್ಲಿ ನಟ ರಿಷಬ್‌ ಶೆಟ್ಟಿ ಅವರು ಶುಕ್ರವಾರ ಚೆನ್ನೈನ ಅವರ ನಿವಾಸದಲ್ಲಿ ರಜನಿಕಾಂತ್ ಅವರನ್ನು ಭೇಟಿಯಾಗಿದ್ದಾರೆ.

ರಿಷಬ್ ಶೆಟ್ಟಿ ನಿರ್ಮಾಣದ ಕನ್ನಡದ ಸಿನಿಮಾ ‘ಕಾಂತಾರ’ವನ್ನು ನೋಡಿ ಸೂಪರ್ ಸ್ಟಾರ್ ರಜನಿಕಾಂತ್‌ ಮನಸಾರೆ ಹೊಗಳಿದ್ದರು. ಈ ಹಿನ್ನೆಲೆಯಲ್ಲಿ ನಟ ರಿಷಬ್‌ ಶೆಟ್ಟಿ ಅವರು ಶುಕ್ರವಾರ ಚೆನ್ನೈನ ಅವರ ನಿವಾಸದಲ್ಲಿ ರಜನಿಕಾಂತ್ ಅವರನ್ನು ಭೇಟಿಯಾಗಿದ್ದಾರೆ.

ಇತ್ತೀಚೆಗಷ್ಟೆ ಸಿನಿಮಾ ನೋಡಿದ್ದ ರಜನಿಕಾಂತ್‌ ಅವರು ಚಿತ್ರದ ಬಗ್ಗೆ ಸದಭಿಪ್ರಾಯ ವ್ಯಕ್ತಪಡಿಸಿದ್ದರು. ತಿಳಿದಿರುವುದಕ್ಕಿಂತ ತಿಳಿಯದಿರುವುದು ಬಹಳಷ್ಟಿರುತ್ತವೆ. ಹೊಂಬಾಳೆ ಫಿಲ್ಮ್ಸ್, ರಿಷಬ್‌ ಶೆಟ್ಟಿ ಉತ್ತಮ ಸಿನಿಮಾ ನೀಡಿದ್ದಾರೆ. ರಿಷಬ್‌ ನಟನೆ, ನಿರ್ದೆಶನ, ಬರವಣಿಗೆಗೆ ಹ್ಯಾಟ್ಸಪ್‌. ಮೈನವಿರೇಳಿಸಿರುವ ಅನುಭವ ನೀಡಿದೆ. ತಂಡಕ್ಕೆ ಶುಭಾಶಯಗಳು’ ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಿಷಬ್‌ ಶೆಟ್ಟಿ, ‘ಸರ್‌ ನೀವು ಭಾರತದ ದೊಡ್ಡ ಸೂಪರ್‌ಸ್ಟಾರ್. ಬಾಲ್ಯದಿಂದಲೂ ನಾನು ನಿಮ್ಮ ಅಭಿಮಾನಿ. ನಿಮ್ಮ ಮೆಚ್ಚುಗೆಯಿಂದ ನನ್ನ ಕನಸು ನನಸಾದಂತಾಗಿದೆ. ಸ್ಥಳೀಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳಲು ನೀವು ನನಗೆ ಪ್ರೇರಣೆಯಾಗಿದ್ದೀರಿ’ ಎಂದು ಟ್ವೀಟ್‌ ಮಾಡಿದ್ದರು.

ಇದರ ಬೆನ್ನಿಗೇ, ರಿಷಬ್‌ ಶೆಟ್ಟಿ ಚೆನ್ನೈನಲ್ಲಿ ರಜನಿಕಾಂತ್‌ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ನೀವು ಒಂದ್ ಸಲ ಹೊಗಳಿದ್ರೆ... ನೂರು ಸಲ ಹೊಗಳ್ದ೦ಗೆ ನಮಗೆ. ಧನ್ಯವಾದಗಳು ರಜನಿಕಾಂತ್‌ ಸರ್‌. ನಮ್ಮ ಕಾಂತಾರ ಚಿತ್ರ ನೋಡಿ ನೀವು ಮೆಚ್ಚಿದ್ದಕ್ಕೆ ನಾವು ಸದಾ ಆಭಾರಿ’ ಎಂದು ರಿಷಬ್ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!