ನಂದಕಿಶೋರ್ ಮತ್ತು ಮೋಹನ್ ಲಾಲ್ 
ಸಿನಿಮಾ ಸುದ್ದಿ

ಸೂಪರ್ ಸ್ಟಾರ್ ಮೋಹನ್ ಲಾಲ್ ನಟನೆಯ ಬಹುಭಾಷಾ ಸಿನಿಮಾ 'ವೃಷಭ' ಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್!

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮೋಹನ್ ಲಾಲ್ ಅವರ ಮುಂದಿನ ಸಿನಿಮಾಗೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು  ಸಿನಿಮಾಗಳನ್ನು ಕೊಟ್ಟ ಚಲನಚಿತ್ರ ನಿರ್ದೇಶಕ ನಂದ ಕಿಶೋರ್ ಇದೀಗ ದೊಡ್ಡ ಮಟ್ಟದ ಬಹುಭಾಷಾ ಚಿತ್ರವೊಂದಕ್ಕೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ.

ಕನ್ನಡದ ನಿರ್ದೇಶಕರಿಗೆ ಪರಭಾಷೆಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಇಲ್ಲಿನ ತಂತ್ರಜ್ಞರು, ಕಲಾವಿದರಿಗೂ ಕೂಡ ಬೇಡಿಕೆ ಹೆಚ್ಚುತ್ತಿದೆ. ಕೆಜಿಎಫ್ ಸಿನಿಮಾದ ಬಳಿಕ, ನಿರ್ದೇಶಕ ಪ್ರಶಾಂತ್ ನೀಲ್ ಈಗ ಟಾಲಿವುಡ್‌ನಲ್ಲಿ ಸಿಕ್ಕಾ ಪಟ್ಟೆ ಬ್ಯುಸಿಯಾಗಿದ್ದಾರೆ. ಈಗ ನಿರ್ದೇಶಕ ನಂದಕಿಶೋರ್ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮೋಹನ್ ಲಾಲ್ ಅವರ ಮುಂದಿನ ಸಿನಿಮಾಗೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು  ಸಿನಿಮಾಗಳನ್ನು ಕೊಟ್ಟ ಚಲನಚಿತ್ರ ನಿರ್ದೇಶಕ ನಂದ ಕಿಶೋರ್ ಇದೀಗ ದೊಡ್ಡ ಮಟ್ಟದ ಬಹುಭಾಷಾ ಚಿತ್ರವೊಂದಕ್ಕೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ.

ಈ ಚಿತ್ರದಲ್ಲಿ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮೋಹನ್ ಲಾಲ್ ನಟಿಸಲಿದ್ದಾರೆ. ಈ ಮೂಲಕ ಕನ್ನಡದ ಮತ್ತೊಬ್ಬ ನಿರ್ದೇಶಕ ನಂದ ಕಿಶೋರ್ ಪ್ಯಾನ್ ಇಂಡಿಯಾ ಸಿನಿಮಾ ನಿರ್ದೇಶನ ಮಾಡಿದವರ ಪಟ್ಟಿಗೆ ಸೇರಿದ್ದಾರೆ.

ಈ ವಿಚಾರದ ಬಗ್ಗೆ ನಟ ಮೋಹಲ್ ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ. "ನಾನು 'ವೃಷಭ' ಚಿತ್ರಕ್ಕೆ ಸಹಿ ಹಾಕಲು ಕಾತರನಾಗಿದ್ದೇನೆ. ಇದು AVS ಸ್ಟುಡಿಯೋಸ್ ನಿರ್ಮಾಣದ ಮೊದಲ ಸಿನಿಮಾ ಆಗಿದೆ. ಈ ಚಿತ್ರವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ. ಅಭಿಷೇಕ್ ವ್ಯಾಸ್, ಪ್ರವೀಣ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಬಂಡವಾಳ ಹೂಡುತ್ತಿದ್ದಾರೆ. ಈ ಬಹುಭಾಷಾ ಸಿನಿಮಾ ಆಕ್ಷನ್ ಮತ್ತು ಭಾವನೆಗಳಿಂದ ತುಂಬಿದೆ. ನಿಮ್ಮೆಲ್ಲರ ಬೆಂಬಲ, ಆಶೀರ್ವಾದವನ್ನು ನಾನು ಕೋರುತ್ತೇನೆ" ಎಂದು ಮೋಹನ್ ಲಾಲ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯ ಬಗ್ಗೆ ಸಿನಿಮಾ ಎಕ್ಸ್‌ಪ್ರೆಸ್ ಜೊತೆಗೆ ಮಾತನಾಡಿದ ನಿರ್ದೇಶಕ ನಂದ ಕಿರೋಶ್, ನಾನು ಮಲಯಾಳಂ ಸೂಪರ್‌ ಸ್ಟಾರ್‌ ಮೋಹನ್ ಲಾಲ್ ಅವರಿಗಾಗಿ ಸಿನಿಮಾ ಒಂದನ್ನು ಮಾಡುತ್ತಿದ್ದೇನೆ. ಇದೊಂದು ಔಟ್ ಅಂಡ್ ಔಟ್ ಕಮರ್ಷಿಯಲ್ ಎಂಟರ್‌ಟೈನರ್ ಸಿನಿಮಾ ಆಗಲಿದೆ. ಈ ಚಿತ್ರದಲ್ಲಿ ನಾಯಕ ನಟ ಹಲವು ಆಯಾಮಗಳಿರುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ" ಎಂದು ಹೇಳಿಕೊಂಡಿದ್ದಾರೆ ನಂದ ಕಿಶೋರ್.

ವರದಿಯ ಪ್ರಕಾರ, ಈ ಚಿತ್ರದಲ್ಲಿ ತೆಲುಗಿನ ದೊಡ್ಡ ಸ್ಟಾರ್ ಒಬ್ಬರು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ. ಈ ಚಿತ್ರದ ಶೂಟಿಂಗ್ ಜುಲೈ 2023ರಲ್ಲಿ ಪ್ರಾರಂಭವಾಗಲಿದೆ. ಹಲವು ಹಂತಗಳಲ್ಲಿ ಸಿನಿಮಾ ಶೂಟಿಂಗ್ ನಡೆಸಲು ಸಿನಿಮಾತಂಡ ಯೋಜನೆ ರೂಪಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಹೊರ ಬಿಡಲಿದೆ ಸಿನಿಮಾ ತಂಡ.

‘ಅಧ್ಯಕ್ಷʼ, ʼರನ್ನʼ, ʼಮುಕುಂದ ಮುರಾರಿʼ ʼಪೊಗರುʼ ಹೀಗೆ ಸಾಲು – ಸಾಲು ಹಿಟ್‌ ಚಿತ್ರಗಳನ್ನು ನೀಡಿರುವ ನಂದ ಕಿಶೋರ್‌ ಶ್ರೇಯಸ್ ಮಂಜು ಮತ್ತು ರೀಷ್ಮಾ ನಾಣಯ್ಯ ಅಭಿನಯದ 'ರಾಣಾ' ಸೇರಿದಂತೆ ಹಲವು ಹೊಸ ಸಿನಿಮಾಗಳಿಗೆ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್ ಮತ್ತು ನಿಖಿಲ್ ಕುಮಾರಸ್ವಾಮಿಗೆ ಅವರ ನಟನೆಯ ಚಿತ್ರಗಳಿಗೂ ನಂದಕಿಶೋರ್ ಡೈರೆಕ್ಷನ್ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ, ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬರಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT