ಏಕ್ತಾ ಕಪೂರ್ 
ಸಿನಿಮಾ ಸುದ್ದಿ

ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್

ಬಿಹಾರದ ಬೇಗುಸರಾಯ್‌ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ.

ಬೇಗುಸರಾಯ್: ಬಿಹಾರದ ಬೇಗುಸರಾಯ್‌ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ. ತಮ್ಮ ವೆಬ್ ಸರಣಿ ‘XXX’ ನಲ್ಲಿ ಸೈನಿಕರನ್ನು ಅವಮಾನಿಸಿದ ಮತ್ತು ಅವರ ಕುಟುಂಬ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಧನ ವಾರಂಟ್ ಹೊರಡಿಸಿದೆ.

ಮಾಜಿ ಸೈನಿಕ ಮತ್ತು ಬೇಗುಸರಾಯ್ ನಿವಾಸಿ ಶಂಭು ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಧೀಶ ವಿಕಾಸ್ ಕುಮಾರ್ ವಾರಂಟ್ ಹೊರಡಿಸಿದ್ದಾರೆ. ಶಂಭುಕುಮಾರ್ ಅವರು 2020 ರಲ್ಲಿ ತಮ್ಮ ದೂರಿನಲ್ಲಿ, ‘XXX’ (ಸೀಸನ್-2) ಸರಣಿಯು ಸೈನಿಕನ ಹೆಂಡತಿಗೆ ಸಂಬಂಧಿಸಿದ ಹಲವಾರು ಆಕ್ಷೇಪಾರ್ಹ ದೃಶ್ಯಗಳನ್ನು ಒಳಗೊಂಡಿದೆ ಎಂದು ಆರೋಪಿಸಿದ್ದಾರೆ.

ಏಕ್ತಾ ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್ ಲಿಮಿಟೆಡ್ ಒಡೆತನದ ಒಟಿಟಿ ಪ್ಲಾಟ್‌ಫಾರ್ಮ್ ಎಎಲ್‌ಟಿ ಬಾಲಾಜಿಯಲ್ಲಿ ಈ ಸರಣಿಯನ್ನು ಪ್ರಸಾರ ಮಾಡಲಾಗಿದೆ. ಶೋಭಾ ಕಪೂರ್ ಬಾಲಾಜಿ ಟೆಲಿಫಿಲ್ಮ್ ಗಳೊಂದಿಗೆ ಸಹ ಸಂಬಂಧ ಹೊಂದಿದ್ದಾರೆ ಎಂದು ಶಂಭು ಕುಮಾರ್ ಅವರ ವಕೀಲ ಹೃಷಿಕೇಶ್ ಪಾಠಕ್ ಹೇಳಿದ್ದಾರೆ.

ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿ ಮಾಡಿತ್ತು ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಮುಂದೆ ಹಾಜರಾಗುವಂತೆ ಹೇಳಿತ್ತು. ಆದರೆ ಅವರು ಆಕ್ಷೇಪಣೆಯ ನಂತರ ಸರಣಿಯಲ್ಲಿನ ಕೆಲವು ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ಅವರ ವಿರುದ್ಧ ವಾರಂಟ್ ಹೊರಡಿಸಿದ ನಂತರ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ ಎಂದು ವಕೀಲ ಹೃಷಿಕೇಶ್ ಪಾಠಕ್ ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT