ಸುದೀಪ್ 
ಸಿನಿಮಾ ಸುದ್ದಿ

ಕಿಚ್ಚ ರಾಜಕೀಯ ಪ್ರವೇಶ ಬೆನ್ನಲ್ಲೆ ಬಂತು ಬೆದರಿಕೆ: ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಎಚ್ಚರಿಕೆ; ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ!

ನಟ ಸುದೀಪ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ  ಎರಡು ಬೆದರಿಕೆ ಪತ್ರ ಬಂದಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಬೆಂಗಳೂರು: ನಟ ಸುದೀಪ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ  ಎರಡು ಬೆದರಿಕೆ ಪತ್ರ ಬಂದಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಈ ಪತ್ರದಲ್ಲಿ ಕಿಚ್ಚ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದು, ಪತ್ರದ ಮೂಲಕ್ಕಾಗಿ ಶೋಧ ನಡೆಯುತ್ತಿದೆ.

ಸುದೀಪ್  ಮ್ಯಾನೇಜರ್  ಮಂಜುನಾಥ್ ಅವರಿಗೆ ಈ ಪತ್ರ ಸಿಕ್ಕಿದೆ ಎನ್ನಲಾಗಿದ್ದು, ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಬೆದರಿಕೆ ಹಾಕಲಾಗಿದೆ. ಇದರಿಂದ ಸುದೀಪ್​ಗೆ ಮಾನಸಿಕ ಕಿರುಕುಳ  ಉಂಟಾಗಿದ್ದು, ನಟನ ಘನತೆಗೆ ಧಕ್ಕೆ ತರಲು ಮಾಡಿರುವ ಸಂಚು ಎಂದು ಮಂಜುನಾಥ್ ಅವರು ದೂರಿದ್ದಾರೆ.

ಸದ್ಯ ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಎಲ್ಲಿಂದ ಬಂತು, ಯಾರು ಕಳುಹಿಸಿದ್ದು ಎನ್ನುವ ತನಿಖೆ ನಡೆಯುತ್ತಿದೆ. ಈ ಪ್ರಕರಣವನ್ನು ಸಿಸಿಬಿಗೆ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸುದೀಪ್ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಈ ಬೆದರಿಕೆ ಪತ್ರ ಬಂದಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT