ಆಕಾಂಕ್ಷಾ ದುಬೆ 
ಸಿನಿಮಾ ಸುದ್ದಿ

ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ: ಮತ್ತೋರ್ವ ಆರೋಪಿ ಭೋಜ್‌ಪುರಿ ಗಾಯಕನಿಗೆ ಲುಕ್ ಔಟ್ ನೋಟಿಸ್ ಜಾರಿ

ಸಾರಾನಾಥ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ವಾರಣಾಸಿ: ಸಾರಾನಾಥ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಇಬ್ಬರು ಆರೋಪಿಗಳಾದ ಸಮರ್ ಸಿಂಗ್ ಮತ್ತು ಸಂಜಯ್ ಸಿಂಗ್ ದೇಶವನ್ನು ತೊರೆಯದಂತೆ ಎಲ್ಲಾ ವಿಮಾನ ನಿಲ್ದಾಣಗಳಿಗೆ ವಿವರಗಳನ್ನು ಕಳುಹಿಸಲಾಗಿದೆ ಎಂದು ಸಾರನಾಥ್ ಧರ್ಮಪಾಲ್ ಸಿಂಗ್ ತಿಳಿಸಿದ್ದಾರೆ.

ನಟಿಯ ತಾಯಿ ಮಧು ದುಬೆ ಪರ ಪ್ರಕರಣವನ್ನು ಕೈಗೆತ್ತಿಕೊಂಡಿರುವ ವಕೀಲ ಶಶಾಂಕ್ ಶೇಖರ್ ತ್ರಿಪಾಠಿ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪ್ರಶ್ನೆಯನ್ನು ಎತ್ತಿದ್ದು, ವೈದ್ಯಕೀಯ ತಜ್ಞರ ಸಲಹೆಯನ್ನು ಪಡೆಯುತ್ತಿದ್ದೇನೆ ಮತ್ತು ಅದರ ಆಧಾರದ ಮೇಲೆ ಪೊಲೀಸರಿಗೆ ಪ್ರಶ್ನೆಗಳನ್ನು ಸಿದ್ಧಪಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ತ್ರಿಪಾಠಿ ಬುಧವಾರ ಸಿಬಿಐ ಅಥವಾ ಸಿಬಿ ಸಿಐಡಿಯಿಂದ ಈ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಅವರು, 25 ವರ್ಷದ ನಟಿಯ ಸಾವು ಆತ್ಮಹತ್ಯೆಯಿಂದಲ್ಲ. ಬದಲಿಗೆ, ಹೋಟೆಲ್ ಕೋಣೆಯಲ್ಲಿ ಕೆಲವರು ಆಕೆಯನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಅಂತ್ಯಸಂಸ್ಕಾರ ನಡೆಸಬೇಕು ಎಂದು ತಾಯಿ ಒತ್ತಾಯ ಮಾಡಿದರೂ, ಆಕಾಂಕ್ಷಾ ಶವವನ್ನು ಬಲವಂತವಾಗಿ ಸುಟ್ಟು ಹಾಕಲಾಗಿದೆ. ಭೋಜ್‌ಪುರಿ ಉದ್ಯಮದಲ್ಲಿ ಅನೇಕ ಪ್ರಸಿದ್ಧ ಜನರು ದುಬೆಯನ್ನು ಶೋಷಿಸುತ್ತಿದ್ದರು ಮತ್ತು ಅವರ ಕೆಲಸಕ್ಕೆ ಪಾವತಿಸುತ್ತಿರಲಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ.

25 ವರ್ಷದ ನಟಿ ಮಾರ್ಚ್ 26 ರಂದು ಫ್ಯಾನ್‌ಗೆ ಬಟ್ಟೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು 'ಕಸಂ ಪೈದಾ ಕರ್ನೆ ವಾಲೆ ಕಿ 2', 'ಮುಜ್ಸೆ ಶಾದಿ ಕರೋಗಿ' (ಭೋಜ್‌ಪುರಿ) ಮತ್ತು 'ವೀರೋನ್ ಕೆ ವೀರ್' ಸೇರಿದಂತೆ ಹಲವಾರು ಪ್ರಾದೇಶಿಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT