ನಟಿ ರಮ್ಯಾ 
ಸಿನಿಮಾ ಸುದ್ದಿ

'ಸ್ವಾತಿ ಮುತ್ತಿನ ಮಳೆ ಹನಿಯೆ' ಶೀರ್ಷಿಕೆ ಪ್ರಕರಣ: ರಮ್ಯಾ ಪರವಾಗಿ ನ್ಯಾಯಾಲಯ ತೀರ್ಪು

ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದ ನಟಿ ರಮ್ಯಾ ಅವರು ನಿರ್ಮಾಪಕಿಯಾಗಿ ಮತ್ತೆ ಎರಡನೇ ಇನಿಂಗ್ಸ್ ಆರಂಭಿಸಿದ್ದರು. ರಮ್ಯಾ ಅವರ ಮೊದಲ ನಿರ್ಮಾಣ ಮತ್ತು ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾ ಟೈಟಲ್ ವಿವಾದಕ್ಕೆ ಕಾರಣವಾಗಿತ್ತು. ಇದೀಗ, ಅಂತಿಮವಾಗಿ ರಮ್ಯಾ ಅವರಿಗೆ ನ್ಯಾಯಾಲಯ ರಿಲೀಫ್ ನೀಡಿದೆ.

ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದ ನಟಿ ರಮ್ಯಾ ಅವರು ನಿರ್ಮಾಪಕಿಯಾಗಿ ಮತ್ತೆ ಎರಡನೇ ಇನಿಂಗ್ಸ್ ಆರಂಭಿಸಿದ್ದರು. ರಮ್ಯಾ ಅವರ ಮೊದಲ ನಿರ್ಮಾಣ ಮತ್ತು ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾ ಟೈಟಲ್ ವಿವಾದಕ್ಕೆ ಕಾರಣವಾಗಿತ್ತು. ಇದೀಗ, ಅಂತಿಮವಾಗಿ ರಮ್ಯಾ ಅವರಿಗೆ ನ್ಯಾಯಾಲಯ ರಿಲೀಫ್ ನೀಡಿದೆ.

ಸಿಟಿ ಸಿವಿಲ್ ನ್ಯಾಯಾಲಯವು ರಮ್ಯಾ ಅವರ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಪರವಾಗಿ ತೀರ್ಪು ನೀಡಿದ್ದು, ಚಿತ್ರಕ್ಕೆ ಅದೇ ಶೀರ್ಷಿಕೆಯನ್ನು ಬಳಸಲು ಅವಕಾಶ ಮಾಡಿಕೊಟ್ಟಿದೆ. ಇದಕ್ಕೂ ಮುನ್ನ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ರಮ್ಯಾ ಅವರು ಈ ಶೀರ್ಷಿಕೆಯನ್ನು ಬಳಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು ಮತ್ತು ತಡೆಯಾಜ್ಞೆಯನ್ನು ತಂದಿದ್ದರು. ಅದನ್ನೀಗ ನ್ಯಾಯಾಲಯ ತೆಗೆದುಹಾಕಿದೆ.

ಸ್ವಾತಿ ಮುತ್ತಿನ ಮಳೆ ಹನಿ, ರೊಮ್ಯಾಂಟಿಕ್ ಎಂಟರ್‌ಟೈನರ್ ಎಂದು ಬಿಂಬಿಸಲಾಗಿದೆ. ರಾಜ್ ಬಿ ಶೆಟ್ಟಿ ಜೊತೆ ಸಿರಿ ರವಿಕುಮಾರ್ ನಟಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರ ಏಪ್ರಿಲ್ 15 ರೊಳಗೆ ಸಿದ್ಧವಾಗುವ ನಿರೀಕ್ಷೆಯಿದೆ. ಚಿತ್ರತಂಡ ಚಿತ್ರ ಬಿಡುಗಡೆಯ ದಿನಾಂಕ ನಿಗಧಿಗೆ ಚರ್ಚಿಸುತ್ತಿದ್ದಾರೆ.

ರಾಜ್ ಮತ್ತು ಸಿರಿ ಅವರಲ್ಲದೆ, ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತುಮ್ಮಿನಾಡ್ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಅವರ ಸಂಗೀತವಿದ್ದು, ಪ್ರವೀಣ್ ಶ್ರೀಯಾನ್ ಛಾಯಾಗ್ರಾಹಕ ಮತ್ತು ಸಂಕಲನಕಾರರ ಎರಡು ಜವಾಬ್ದಾರಿಯನ್ನು ಹೊತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel