ಚಿತ್ರದ ಚಿತ್ರೀಕರಣದಲ್ಲಿ ನಟ ಸುದೀಪ್. 
ಸಿನಿಮಾ ಸುದ್ದಿ

ಬಿಗ್ ಬಾಸ್ ಖ್ಯಾತಿಯ ರಾಜೀವ್‌ಗೆ ನಟ ಸುದೀಪ್ ಸಾಥ್‌: ತಮ್ಮ ಭಾಗದ ಚಿತ್ರೀಕರಣ ಪೂರ್ಣಗೊಳಿಸಿದ ಕಿಚ್ಚ

'ಬಿಗ್ ಬಾಸ್‌' ಖ್ಯಾತಿಯ ರಾಜೀವ್ ನಟನೆಯ 'ಉಸಿರೇ ಉಸಿರೇ' ಸಿನಿಮಾದಲ್ಲಿ 'ಕಿಚ್ಚ' ಸುದೀಪ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

'ಬಿಗ್ ಬಾಸ್‌' ಖ್ಯಾತಿಯ ರಾಜೀವ್ ನಟನೆಯ 'ಉಸಿರೇ ಉಸಿರೇ' ಸಿನಿಮಾದಲ್ಲಿ 'ಕಿಚ್ಚ' ಸುದೀಪ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ಚಿತ್ರವು ಕೊನೆಯ ಹಂತದ ಚಿತ್ರೀಕರಣ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಸುದೀಪ್ ಅವರು ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ಸುದೀಪ್ ಅವರ ಪಾತ್ರದ ಕುರಿತ ವಿವರಗಳನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದರೆ, ಸೆಟ್ ನಲ್ಲಿ ಸುದೀಪ್ ಅವರು ಇರುವ ಫೋಟೋಗಳನ್ನು ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಪ್ರದೀಪ್ ಯಾದವ್ ಅವರ ಗೊಂಬೆ ಬ್ಯಾನರ್‌ನ ಬೆಂಬಲದೊಂದಿಗೆ, ಉಸಿರೆ ಉಸಿರೆ ಚಿತ್ರಕ್ಕೆ ಮನು ಅವರ ಛಾಯಾಗ್ರಹಣ ಮತ್ತು ವಿವೇಕ್ ಚಕ್ರವರ್ತಿ ಅವರ ಸಂಗೀತವಿದೆ.

‘ಬಿಗ್ ಬಾಸ್’ ಖ್ಯಾತಿಯ ರಾಜೀವ್ ಉಸಿರೇ ಉಸಿರೇ ಚಿತ್ರದಲ್ಲಿ ನಾಯಕ ನಟನಾಗಿದ್ದು, ಶ್ರೀಜಿತ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದಲ್ಲದೆ ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಅವರು ಚಿತ್ರದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!