ದೀಕ್ಷಿತ್ ಶೆಟ್ಟಿ-ಕೀರ್ತಿ ಸುರೇಶ್-ನಾನಿ 
ಸಿನಿಮಾ ಸುದ್ದಿ

ನಾನಿ-ಕೀರ್ತಿ ಸುರೇಶ್ ಅಭಿನಯದ ದಸರಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್, ಕನ್ನಡದಲ್ಲೂ ಲಭ್ಯ!

ತೆಲುಗು ಸ್ಟಾರ್ ನಾನಿ ಅವರ ಪ್ಯಾನ್ ಇಂಡಿಯಾ ಸಿನಿಮಾ 'ದಸರಾ' ಏಪ್ರಿಲ್ 27 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ ಆಗಲಿದೆ. ಸ್ಟ್ರೀಮಿಂಗ್ ಸೇವೆಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ವಿವರಗಳನ್ನು ಹಂಚಿಕೊಂಡಿದೆ.

ಮುಂಬೈ: ತೆಲುಗು ಸ್ಟಾರ್ ನಾನಿ ಅವರ ಪ್ಯಾನ್ ಇಂಡಿಯಾ ಸಿನಿಮಾ 'ದಸರಾ' ಏಪ್ರಿಲ್ 27 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ ಆಗಲಿದೆ.

ಸ್ಟ್ರೀಮಿಂಗ್ ಸೇವೆಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ವಿವರಗಳನ್ನು ಹಂಚಿಕೊಂಡಿದೆ.

'ಈ ವರ್ಷ ದಸರಾ ಬೇಗ ಬರಲಿರುವುದರಿಂದ ಪಟಾಕಿಗಳನ್ನು ಹೊರತರುವ ಸಮಯ! ಏಪ್ರಿಲ್ 27 ರಂದು 'ದಸರಾ' ನೆಟ್‌ಫ್ಲಿಕ್ಸ್‌ಗೆ ಬರಲಿದೆ' ಎಂದು ನೆಟ್‌ಫ್ಲಿಕ್ಸ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶಿಸಿರುವ ಶ್ರೀಕಾಂತ್ ಒಡೆಲಾ ಅವರ 'ದಸರಾ' ಸಿನಿಮಾವು ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಸಿಂಗರೇಣಿ ಕಲ್ಲಿದ್ದಲು ಗಣಿಯ ಬಳಿಯಲ್ಲಿರುವ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದೆ.

ಈ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಮಾರ್ಚ್ 30 ರಂದು ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಬಾಷೆಯಲ್ಲಿ ದೇಶದಾದ್ಯಂತ ಬಿಡುಗಡೆಯಾಗಿದೆ. ಇದು ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ 100 ಕೋಟಿ ರೂ. ಗಳಿಕೆ ಕಂಡಿದೆ.

'ದಸರಾ'ದಲ್ಲಿ ನಟಿ ಕೀರ್ತಿ ಸುರೇಶ್, ಕನ್ನಡದ ದೀಕ್ಷಿತ್ ಶೆಟ್ಟಿ, ಶೈನ್ ಟಾಮ್ ಚಿಕ್ಕೋ, ಸಮುದ್ರಕನಿ, ಸಾಯಿ ಕುಮಾರ್ ಮತ್ತು ಪೂರ್ಣಾ ಕೂಡ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ನೆಕ್ಲೆಸ್ ಕದ್ದ ಮಹಿಳೆಯರು; ಖತರ್ನಾಕ್ ಕಳ್ಳಿಯರ "ಕೈ"ಚಳಕ CCTVಯಲ್ಲಿ ಸೆರೆ!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!