ನಟ ಮಮ್ಮುಟ್ಟಿ ಮತ್ತು ಅವರ ತಾಯಿ ಫಾತಿಮಾ 
ಸಿನಿಮಾ ಸುದ್ದಿ

ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿಗೆ ಮಾತೃವಿಯೋಗ: 93 ವರ್ಷ ವಯಸ್ಸಿನ ಫಾತಿಮಾ ನಿಧನ

ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಅವರಿಗೆ ಮಾತೃವಿಯೋಗವಾಗಿದ್ದು, ಅವರ 93 ವರ್ಷ ವಯಸ್ಸಿನ ತಾಯಿ ಫಾತಿಮಾ ಅವರು ಇಂದು ನಿಧನರಾಗಿದ್ದಾರೆ.

ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಅವರಿಗೆ ಮಾತೃವಿಯೋಗವಾಗಿದ್ದು, ಅವರ 93 ವರ್ಷ ವಯಸ್ಸಿನ ತಾಯಿ ಫಾತಿಮಾ ಅವರು ಇಂದು ನಿಧನರಾಗಿದ್ದಾರೆ.

ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ ಅವರು ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಫಾತಿಮಾ ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಫಾತಿಮಾ ಇಸ್ಮಾಯಿಲ್ ಅವರು ಕೊಚ್ಚಿಯ ಚೆಂಪುವಿನ ಮೂಲದವರಾಗಿದ್ದು, ನಟ ಮಮ್ಮುಟ್ಟಿ ಸೇರಿದಂತೆ ಅವರ ಐವರು ಮಕ್ಕಳು ಅಂದರೆ ನಟ ಇಬ್ರಾಹಿಂ ಕುಟ್ಟಿ, ಜಕಾರಿಯಾ, ಅಮೀನ, ಸೌದಾ ಮತ್ತು ಶಫೀನಾ ಸೇರಿದಂತೆ ತಮ್ಮ ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ 4:00 ಗಂಟೆಗೆ ಚೆಂಪು ಜುಮಾ ಮಸೀದಿ ಕಬ್ರಿಸ್ತಾನ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.

ಇನ್ನು ಫಾತಿಮಾ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡ ಶಶಿತರೂರ್ ಕಂಬನಿ ಮಿಡಿದಿದ್ದು, ತಮ್ಮ ಟ್ವಿಟ್ಟರ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡು, ಮಮ್ಮುಟ್ಟಿ ತಾಯಿಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಚಿತ್ರರಂಗ ಸೇರಿದಂತೆ ಹಲವು ರಾಜಕೀಯ ಗಣ್ಯ ವ್ಯಕ್ತಿಗಳು ಸಹ ಸಂತಾಪ ಸೂಚಿಸುತ್ತಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ