ಶರತ್ ಬಾಬು 
ಸಿನಿಮಾ ಸುದ್ದಿ

ಬಹು ಅಂಗಾಂಗ ಹಾನಿಯಿಂದ ನಟ ಶರತ್ ಬಾಬು ಮತ್ತೆ ಆಸ್ಪತ್ರೆಗೆ ದಾಖಲು

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ಬಹು ಅಂಗಾಂಗ ಹಾನಿಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇತ್ತೀಚಿನ ವಾರಗಳಲ್ಲಿ ಇದೀಗ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

1973 ರಲ್ಲಿ ತೆಲುಗು ಚಿತ್ರಕ್ಕೆ ಪದಾರ್ಪಣೆ ಮಾಡಿದ ಶರತ್ ಬಾಬು ಅವರು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯ ಹಲವಾರು ಚಲನಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಪೋಷಕ ಪಾತ್ರಗಳಲ್ಲಿ ಅತ್ಯುತ್ತಮ ನಟನೆಗಾಗಿ ಶರತ್ ಬಾಬು ಅವರಿಗೆ ಒಂಬತ್ತು ಬಾರಿ ನಂದಿ ಪ್ರಶಸ್ತಿ ಲಭಿಸಿದೆ.

ಅವರು ಶೀಘ್ರ ಗುಣಮುಖರಾಗಲಿ ಎಂದು ಗಣ್ಯರು ಸೇರಿದಂತೆ ನಾನಾ ಕಡೆಯಿಂದ ಹಾರೈಕೆಗಳು ಹರಿದು ಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT