ಉಸಿರೆ ಉಸಿರೆ ಚಿತ್ರದ ಸ್ಟಿಲ್. 
ಸಿನಿಮಾ ಸುದ್ದಿ

ಕಿಚ್ಚ ಸುದೀಪ್'ಗೆ ಸದಾ ಋಣಿಯಾಗಿರುತ್ತೇನೆ: ಬಿಗ್ ಬಾಸ್ ಖ್ಯಾತಿಯ ರಾಜೀವ್

ಬಿಗ್ ಬಾಸ್ ಖ್ಯಾತಿಯ ರಾಜೀವ್ ಅಭಿನಯದ ಉಸಿರೆ ಉಸಿರೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೊದಲ ಹಾಡನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ರಾಜೀವ್ ಅಭಿನಯದ ಉಸಿರೆ ಉಸಿರೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೊದಲ ಹಾಡನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ.

"ಉಸಿರೇ ನನ್ನ ಉಸಿರೇ" ಹಾಡು ಚಿತ್ರದ ಪ್ಯಾತೋ ಸಾಂಗ್ ಆಗಿದ್ದು, ಹಾಡನ್ನು ಕೆ ಕಲ್ಯಾಣ್ ಬರೆದಿದ್ದಾರೆ,  ಗೀತೆಯನ್ನು ವಾಸುಕಿ ವೈಭವ್ ಹಾಡಿದ್ದರೆ, ವಿವೇಕ್ ಚಕ್ರವರ್ತಿ ಹಾಡನ್ನು ಸಂಯೋಜಿಸಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕರು, ಎಲ್ಲರೂ ಸಾಮಾನ್ಯವಾಗಿ ಮೊದಲು ಡ್ಯುಯೆಟ್ ಸಾಂಗ್ ಬಿಡುಗಡೆ ಮಾಡುತ್ತಾರೆ. ಆದರೆ, ನಾವು ಪ್ಯಾತೋ ಸಾಂಗ್ ಬಿಡುಗಡೆ ಮಾಡಿದ್ದೇವೆ. ಈ ಹಾಡಿನಲ್ಲಿ ಇಡೀ ಚಿತ್ರದ ಕಥೆಯಿದೆ. ಹಾಗಾಗಿ ಈ ಹಾಡನ್ನು ಮೊದಲು ಬಿಡುಗಡೆ ಮಾಡಿದೆವು. ಉದ್ದೇಶಪೂರ್ವಕವಾಗಿಯೇ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಹಾಡನ್ನು ಗಮನವಿಟ್ಟು ಕೇಳಿದಾಗ ನಮ್ಮ ಸಿನಿಮಾದ ಕಥೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಉಸಿರೆ ಉಸಿರೆ ಚಿತ್ರದಲ್ಲಿ ಶ್ರೀಜಿತಾ, ರಾಜೀವ್

ನಟ ರಾಜೀವ್ ಅವರು ಮಾತನಾಡಿ, ಕಿಚ್ಚ ಸುದೀಪ್ ಅವರಿಗೆ ಸದಾ ಋಣಿಯಾಗಿದ್ದೇನೆ. ಸುದೀಪ್ ಅವರೇ ನಮಗೆ ಸ್ಪೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಕ್ಲೈಮ್ಯಾಕ್ಸ್​ನಲ್ಲಿ ಸುದೀಪ್ ಅವರ ಅಭಿನಯದ ಸನ್ನಿವೇಶಗಳು ಸುಮಾರು 18 ನಿಮಿಷಗಳು ಬರುತ್ತದೆ‌. ಸುದೀಪ್ ಅವರಿಗೆ ಮತ್ತು ಇಡೀ ಚಿತ್ರ ತಂಡಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ಸಿದ್ಧತೆಗಳ ನಡೆಸುತ್ತಿದೆ.

ಚಿತ್ರದಲ್ಲಿ ರಾಜೀವ್ ಜೊತೆಗೆ ಶ್ರೀಜಿತಾ ನಾಯಕಿಯಾಗಿ ನಟಿಸಿದ್ದಾರೆ. ಇದಲ್ಲದೆ, ಚಿತ್ರದಲ್ಲಿ ಖ್ಯಾತ ತೆಲುಗು ನಟರಾದ ಡಾ ಅಲಿ ಮತ್ತು ಬ್ರಹ್ಮಾನಂದಂ, ದೇವರಾಜ್, ಸಾಧುಕೋಕಿಲಾ ಮತ್ತು ಮಂಜು ಪಾವಗಡ ಕೂಡ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್