ಅನಿರುದ್ಧ್ ಜಟ್ಕರ್ 
ಸಿನಿಮಾ ಸುದ್ದಿ

ಚೆಫ್ ಚಿದಂಬರನಾಗಿ ಅನಿರುದ್ಧ್ ಜಟ್ಕರ್: ಶೀರ್ಷಿಕೆ ಬಿಡುಗಡೆ ಮಾಡಿದ ಸುದೀಪ್

ಜೊತೆ ಜೊತೆಯಲಿ' ಧಾರಾವಾಹಿ ಮೂಲಕ ಖ್ಯಾತಿ ಪಡೆದ ನಟ ಅನಿರುದ್ಧ ಅವರು ಈಗ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ 'chef ಚಿದಂಬರ' ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಶೀರ್ಷಿಕೆಯನ್ನು ನಟ ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.

ರಾಘು ಚಿತ್ರದ ಖ್ಯಾತಿಯ ನಿರ್ದೇಶಕ ಎಂ ಆನಂದರಾಜ್ ನಿರ್ದೇಶನದ ಹೊಸ ಚಿತ್ರವೊಂದರಲ್ಲಿ ನಟ ಅನಿರುದ್ಧ್ ಜಟ್ಕರ್ ನಟಿಸುತ್ತಿದ್ದಾರೆ ಎಂದು ಈ ಮೊದಲೇ ಘೋಷಣೆ ಮಾಡಲಾಗಿತ್ತು.

ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ 'chef ಚಿದಂಬರ' ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಶೀರ್ಷಿಕೆಯನ್ನು ನಟ ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.

'ಜೊತೆ ಜೊತೆಯಲಿ' ಧಾರಾವಾಹಿ ಮೂಲಕ ಖ್ಯಾತಿ ಪಡೆದ ನಟ ಅನಿರುದ್ಧ ಅವರು ಈಗ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಸಿನಿಮಾಗಳಲ್ಲಿ ಬಣ್ಣ ಹಚ್ಚುತ್ತಿದ್ದ ಅನಿರುದ್ಧ ಅವರು ಐದು ವರ್ಷಗಳ ನಂತರ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗುತ್ತಿದ್ದಾರೆ.

ಇದೇ ತಿಂಗಳ 10ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಡಾರ್ಕ್ ಕಾಮಿಡಿ ಜಾನರ್‌ನ ಈ ಚಿತ್ರದಲ್ಲಿ ಅನಿರುದ್ಧ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ಸಹ ಬಿಡುಗಡೆಯಾಗಿದೆ. ರೂಪಾ ಡಿ ಎನ್ ಅವರು ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಸಿನಿಮಾಕ್ಕೆ ನಿರ್ದೇಶಕರೇ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ.

ಇದೊಂದು ಡಾರ್ಕ್ ಕಾಮಿಡಿ ಸಿನಿಮಾವಾಗಿದೆ ಎಂದಿರುವ ಆನಂದ್  ಚಿತ್ರದಲ್ಲಿ ಅನಿರುದ್ಧ್ ಅವರನ್ನು ಮೊದಲ ಬಾರಿಗೆ ಬಾಣಸಿಗನ ಪಾತ್ರದಲ್ಲಿ ತೋರಿಸಲಾಗುತ್ತಿದೆ.  ನಾನು ಸ್ಕ್ರಿಪ್ಟ್  ಬರೆದಿದ್ದೆ,  30 ವರ್ಷದ ಸೂಕ್ತ ನಟನ ಹುಡುಕಾಟದಲ್ಲಿದ್ದೆ, ಕುಟುಂಬ ಪ್ರೇಕ್ಷಕರೊಂದಿಗೆ ಅನುರಣಿಸಬಲ್ಲ ವ್ಯಕ್ತಿ, ಅನಿರುದ್ಧ ಅವರ ಆಲೋಚನೆ ನನ್ನ ಮನಸಿಗೆ ಬಂತು ಎಂದು ಆನಂದ್ ತಿಳಿಸಿದ್ದಾರೆ.

ಕಥೆಯು ಅಪರಾಧ, ಕೊಲೆ ಮತ್ತು ನಿಗೂಢತೆಯ ಅಂಶಗಳನ್ನು ಒಳಗೊಂಡಿದೆ, ನಾಯಕನ ಆಂತರಿಕ ಸಂಘರ್ಷ, ಆತ ಅದರಲ್ಲಿ ಸಿಲುಕಿಕೊಳ್ಳುವುದು ಮತ್ತು ಆತ ಸಂಕಟದಿಂದ ಹೊರಬರಲು ಅವನು  ಮಾಡುವ ತಂತ್ರಗಳ ಸುತ್ತ ಕತೆ ಸುತ್ತತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, 'ವಿಕ್ರಾಂತ್ ರೋಣ' ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ ಐ ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಅನಿರುದ್ಧ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ 'ಲವ್ ಮಾಕ್ಟೇಲ್' ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸುತ್ತಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು 'chef ಚಿದಂಬರ' ಚಿತ್ರದಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT