ಸ್ಪಂದನ-ವಿಜಯ ರಾಘವೇಂದ್ರ 
ಸಿನಿಮಾ ಸುದ್ದಿ

ನಾಳೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ: ಮಲ್ಲೇಶ್ವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಥಾಲ್ಯಾಂಡ್ ಪ್ರವಾಸ ಹೋಗಿದ್ದ ವೇಳೆ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಬೆಂಗಳೂರು: ಥಾಲ್ಯಾಂಡ್ ಪ್ರವಾಸ ಹೋಗಿದ್ದ ವೇಳೆ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಇಂದು ರಾತ್ರಿ 11 ಗಂಟೆ ಸುಮಾರಿಗೆ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಸಾಧ್ಯತೆ ಇದೆ. 12 ಗಂಟೆ ವೇಳೆಗೆ ಮಲ್ಲೇಶ್ವರಂನಲ್ಲಿರುವ ಅವರ ತಂದೆ ಮನೆ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಮನೆಗೆ ತಲುಪಲಿದೆ. ಬಳಿಕ ಮನೆಯ ಬಳಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಾಳೆ ಮಧ್ಯಾಹ್ನದವರೆಗೂ ಅಂತಿಮ ದರ್ಶನ ನಡೆಯಲಿದೆ.

ಇಂದು ಬೆಳಗ್ಗೆಯಿಂದಲೂ ಬ್ಯಾಂಕಾಕ್​ನಲ್ಲಿ ಒಂದಷ್ಟು ಕಾನೂನಾತ್ಮಕ ಪ್ರಕ್ರಿಯೆಗಳು ನಡೆಯುತ್ತಿವೆ. ಈಗಾಗಲೇ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ನಡೆದಿದೆ. ಬಾಕಿ ಉಳಿದಿರುವ ಪ್ರಕ್ರಿಯೆಗಳು ಇಂದು ಮಧ್ಯಾಹ್ನದ ಒಳಗೆ ಮುಗಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕ ಸ್ಪಂದನಾ ಚಿಕ್ಕಪ್ಪ ಬಿ.ಕೆ.ಹರಿಪ್ರಸಾದ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಸ್ಪಂದನಾ ಅವರ ಪೊಸ್ಟ್ ಮಾರ್ಟಂ ಮುಗಿದಿದೆ. ಥೈಲಾಂಟ್​ನಲ್ಲಿ ಒಂದು ಘಂಟೆಗೆ ಪ್ರೊಸಿಜರ್ ಮುಗಿಯಲಿದೆ. ಸಂಜೆ ಥೈ ಏರ್​ಲೈನ್ಸ್​ನಲ್ಲಿ ಮೃತದೇಹವನ್ನು ತರಲಾಗುವುದು. ರಾತ್ರಿ 11 ರ ವೇಳೆಗೆ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದೆ. ರಾತ್ರಿಯಿಂದ ನಾಳೆ ಮಧ್ಯಾಹ್ನದವರೆಗೂ ಮಲ್ಲೇಶ್ವರಂ ರಲ್ಲಿ ಅಂತಿಮನಮನಕ್ಕೆ ಅವಕಾಶ ನೀಡಲಾಗಿದೆ. ನಾಳೆ ಮಧ್ಯಾಹ್ನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್​ನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ