ಕೊರಗಜ್ಜನ ಸನ್ನಿಧಿಯಲ್ಲಿ ಮಾಲಾಶ್ರೀ ಕುಟುಂಬ 
ಸಿನಿಮಾ ಸುದ್ದಿ

ಕೊರಗಜ್ಜನ ಆದಿಸ್ಥಳಕ್ಕೆ ಮಾಲಾಶ್ರೀ ಭೇಟಿ: ಈಡೇರಿದ ಬೇಡಿಕೆ; ಕನಸಿನ ರಾಣಿ ತೀರಿಸಿದ್ರು ಹರಕೆ!

ಕುತ್ತಾರು ಕೊರಗಜ್ಜನ ಕಟ್ಟೆಗೆ ಭೇಟಿ ನೀಡುವ ಗಣ್ಯರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸೆಲೆಬ್ರಿಟಿಗಳು ಇಲ್ಲಿಗೆ ಬಂದು ಕೊರಗಜ್ಜನ ಆಶೀರ್ವಾದ ಪಡೆದು ಹೋಗುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಖ್ಯಾತ ನಟಿ ಮಾಲಾಶ್ರೀ ಬಂದಿದ್ದಾರೆ.

ಮಂಗಳೂರು: ಕುತ್ತಾರು ಕೊರಗಜ್ಜನ ಕಟ್ಟೆಗೆ ಭೇಟಿ ನೀಡುವ ಗಣ್ಯರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸೆಲೆಬ್ರಿಟಿಗಳು ಇಲ್ಲಿಗೆ ಬಂದು ಕೊರಗಜ್ಜನ ಆಶೀರ್ವಾದ ಪಡೆದು ಹೋಗುತ್ತಿದ್ದಾರೆ. ಈಗ ಸ್ಯಾಂಡಲ್​ವುಡ್ ಖ್ಯಾತ ನಟಿ ಮಾಲಾಶ್ರೀ ಬಂದಿದ್ದಾರೆ.

ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ರಾಧನಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ‌.

ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಂದುಕೊಂಡಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.

ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು. ಈ ಸಂದರ್ಭದಲ್ಲಿ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!