ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ವಿಡಿಯೋ ಲೀಕ್ ಮಾಡುವ ಬೆದರಿಕೆ ಆರೋಪ: ನಟ ನಿರ್ಮಾಪಕ ವಿರೇಂದ್ರ ಬಾಬು ಬಂಧನ
ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದ ಘಟನೆ ಇದಾಗಿದೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ್ದಾರೆ ವೀರೇಂಂದ್ರ ಬಾಬು. ಬಳಿಕ ಅವರ ಮೇಲೆ ನಟ ಅತ್ಯಾಚಾರ ಮಾಡಿದ್ದಾರೆ. ಇದನ್ನು ಅವರು ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ವಿರೇಂದ್ರ ಬಾಬು, ಹಣ ಕೊಡದೇ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದರು.
ಇದೀಗ ಕಳೆದ ಜುಲೈ 30 ರಂದು ಮತ್ತೆ ತನಗೆ ಬೆದರಿಕೆ ಹಾಕಿದ್ದಾನೆ ಎಂದು ಅದೇ ಮಹಿಳೆ ಆರೋಪಿಸಿದ್ದಾರೆ. ಮಹಿಳೆಯನ್ನ ಕಾರಿನಲ್ಲಿ ಸುತ್ತಾಡಿಸಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಂಡಿರುವ ಆರೋಪ ಮಾಡಿದ್ದಾಳೆ. ಈ ಆರೋಪ ಸಂಬಂಧ ವೀರಪ್ಪ ಬಾಬು ಹಾಗೂ ಆತನ ಸ್ನೇಹಿತರ ಮೇಲೆ ಎಫ್ಐಆರ್ ದಾಖಲಿಸಿ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.