ಉಪೇಂದ್ರ 
ಸಿನಿಮಾ ಸುದ್ದಿ

ಉಪೇಂದ್ರ ಮೊಬೈಲ್ ಸ್ವಿಚ್ ಆಫ್: ಬಂಧನ ಭೀತಿಯಿಂದ ನಾಪತ್ತೆ ಆದ್ರಾ ಸೂಪರ್ ಸ್ಟಾರ್?

ಫೇಸ್‌ಬುಕ್‌ ಲೈವ್‌ನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ನಟ ಉಪೇಂದ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಿಯಲ್ ಸ್ಟಾರ್ ಉಪ್ಪಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ಫೇಸ್‌ಬುಕ್‌ ಲೈವ್‌ನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ನಟ ಉಪೇಂದ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಿಯಲ್ ಸ್ಟಾರ್ ಉಪ್ಪಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇಂದು ಬೆಳಗ್ಗೆ ಉಪೇಂದ್ರ ಅವರ ಮನೆಗೆ ಭೇಟಿ ನೀಡಿರುವ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಅಟ್ರಾಸಿಟಿ ಕೇಸ್ ಗಂಭೀರ ಸ್ವರೂಪ ಪಡೆದುಕೊಳ್ತಿದ್ದಂತೆ ನಟ ಉಪೇಂದ್ರ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಉಪೇಂದ್ರ ಅವರ ಮನೆಗೆ ಪೊಲೀಸರು ನೋಟಿಸ್ ನೀಡಲು ಹೋದಾಗ ಅವರ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಕತ್ರಿಗುಪ್ಪೆ ಹಾಗೂ ಸದಾಶಿವನಗರದಲ್ಲಿರುವ ಎರಡೂ ನಿವಾಸಕ್ಕೂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸ್ನೇಹಿತರು ಹಾಗೂ ಸಂಬಂಧಿಕರ ಸಂಪರ್ಕದಲ್ಲಿರುವ ಉಪೇಂದ್ರ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಟ ಉಪೇಂದ್ರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಾದ್ರೂ ಅರೆಸ್ಟ್ ಮಾಡುವ ಸಾಧ್ಯತೆ ಇದೆ. ಯಾಕಂದರೆ ಉಪೇಂದ್ರ ವಿರುದ್ಧ ಜಾಮೀನುರಹಿತ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಕೂಡ ಸದ್ಯ ಉಪೇಂದ್ರ ಅವರನ್ನು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.  ಮೊಬೈಲ್ ಸ್ವಿಚ್ ಆಫ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಉಪ್ಪಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

SCROLL FOR NEXT