ಪವನ್ 
ಸಿನಿಮಾ ಸುದ್ದಿ

ಮಂಡ್ಯ ಮೂಲದ ಉದಯೋನ್ಮುಖ ಹಿಂದಿ ಧಾರಾವಾಹಿ ನಟ ಪವನ್ ಹೃದಯಾಘಾತದಿಂದ ಸಾವು

ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ, ಅವರಿಗೆ 25 ವರ್ಷ ವಯಸ್ಸಾಗಿತ್ತು.

ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ, ಅವರಿಗೆ 25 ವರ್ಷ ವಯಸ್ಸಾಗಿತ್ತು.

ಪವನ್ ಮುಂಬೈನಲ್ಲಿಯೇ ನೆಲೆಸಿದ್ದರು. ಇವರು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿ‌ನ ಹರಿಹರಪುರ ಗ್ರಾಮದವರು. ಹಿಂದಿ, ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ನಟಿಸುತ್ತಿದ್ದರು.

ಸಿನಿಮಾಗಳಲ್ಲಿ ಅಭಿನಯಿಸಿ, ಬೆಳ್ಳಿತೆರೆಯಲ್ಲಿ ಮಿಂಚಬೇಕೆಂದು ಕನಸ್ಸು ಕಂಡಿದ್ದ ಪವನ್ ತಂದೆ ನಾಗರಾಜು ಹಾಗೂ ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು, ಗುರುವಾರ (ಆ.17) ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇಂದು ಹುಟ್ಟೂರಿನಲ್ಲಿ ಮೃತ ಯುವ ನಟನ ಅಂತ್ಯಸಂಸ್ಕಾರ ನಡೆಯಲಿದೆ. ಮಗನನ್ನು ಕಳೆದುಕೊಂಡು ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!