ಸೃಜನ್ ಲೋಕೇಶ್ ಮತ್ತು ರಜಿನಿ ಭಾರದ್ವಾಜ್. 
ಸಿನಿಮಾ ಸುದ್ದಿ

'GST' ಮೂಲಕ ಸೃಜನ್ ಲೋಕೇಶ್ ನಿರ್ದೇಶನಕ್ಕೆ; ವಿಶೇಷಗಳ ಹೂರಣ!

ನಟ, ನಿರೂಪಕ ಹಾಗೂ ನಿರ್ಮಾಪಕನಾಗಿ ಜನಪ್ರಿಯ ಗಳಿಸಿರುವ ಖ್ಯಾತ ನಟ ಸೃಜನ್ ಲೋಕೇಶ್ ಅವರು, GST ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ.

ನಟ, ನಿರೂಪಕ ಹಾಗೂ ನಿರ್ಮಾಪಕನಾಗಿ ಜನಪ್ರಿಯ ಗಳಿಸಿರುವ ಖ್ಯಾತ ನಟ ಸೃಜನ್ ಲೋಕೇಶ್ ಅವರು, GST ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ.

ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು.

ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಆರಂಭ ಫಲಕ ತೋರಿದರು. ಗಿರಿಜಾ ಲೋಕೇಶ್ ಕ್ಯಾಮೆರಾ ಚಾಲನೆ ಮಾಡಿದರು.

ಈ ಸಂದರ್ಭದಲ್ಲಿ ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಸುಂದರರಾಜ್, ತಾರಾ, ಶೃತಿ, ನಿರೂಪ್ ಭಂಡಾರಿ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಿದರು.

ಬಳಿಕ ಈ ಚಿತ್ರದಲ್ಲಿ ಮೂರು ವಿಶೇಷಗಳಿದೆ ಎಂದು ಮಾತು ಆರಂಭಿಸಿದ ಸೃಜನ್ ಲೋಕೇಶ್, ನನ್ನ ಲಕ್ಕಿ ನಂಬರ್ 7. ಮೊದಲು‌ ಇದು 2023 ಇದನ್ನು ಕೂಡಿಸಿದಾಗ ಏಳು ಬರುತ್ತದೆ. ನನ್ನ ನಟನೆಯ 25 ನೇ ಚಿತ್ರ. 2+5 =7.  ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ 34ನೇ ಚಿತ್ರ. 3+4 ಕೂಡಿದಾಗ ಏಳಾಗುತ್ತದೆ. ಇನ್ನೊಂದು ವಿಶೇಷ, ನಮ್ಮ ತಾತನ ಚಿತ್ರದಲ್ಲಿ ನಮ್ಮ ಅಪ್ಪ ಬಾಲ ಕಲಾವಿದನಾಗಿ, ನಮ್ಮಪ್ಪನ ಚಿತ್ರದಲ್ಲಿ ನಾನು ಬಾಲ ಕಲಾವಿದನಾಗಿ ಅಭಿನಯಿಸಿದ್ದೆ. ಈಗ ನನ್ನ ಚಿತ್ರದಲ್ಲಿ ನನ್ನ ಮಗ ಮಾಸ್ಟರ್ ಸುಕೃತ್ ಬಾಲ ಕಲಾವಿದನಾಗಿ ನಟಿಸುತ್ತಿದ್ದಾನೆ. ನಾಲ್ಕನೇ ಜನರೇಶನ್ ಈ ರೀತಿ ನಟಿಸುತ್ತಿರುವುದು ಇದೇ ಮೊದಲು ಎನ್ನಬಹುದು ಎಂದು ಹೇಳಿದರು.

ಮತ್ತೊಂದು ವಿಶೇಷವೆಂದರೆ ನನ್ನ ಮೊದಲ ನಿರ್ದೇಶನದ ಚಿತ್ರದಲ್ಲೇ ನನ್ನ ತಾಯಿಗೆ ಆ್ಯಕ್ಷನ್ ಕಟ್ ಹೇಳುತ್ತಿರುವುದು. ಈ ಎಲ್ಲಾ‌ ಕಾರಣಗಳಿಂದ ಈ ಚಿತ್ರ ನನಗೆ ವಿಶೇಷ. ಇನ್ನು “G S T” ಬಗ್ಗೆ ಹೇಳಬೇಕೆಂದರೆ, ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್” ಎಂಬ ಅಡಿಬರಹವಿದೆ. ಈ ವಾಕ್ಯ ಹೇಳುವಂತೆ “ದೆವ್ವಗಳಿಗೂ‌ ಸಮಸ್ಯೆಯಿದೆ” ಎಂಬುದು. ಆ‌ ಸಮಸ್ಯೆ ಏನು ಎಂಬುದನ್ನು ಚಿತ್ರದಲ್ಲೇ ನೋಡಬೇಕು.‌ ಈ ಚಿತ್ರದಲ್ಲಿ ಮನರಂಜನೆಯ ಮಹಾಪೂರ ಹರಿಯುವುದು ಗ್ಯಾರೆಂಟಿ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

 ಚಿತ್ರದಲ್ಲಿ ಗಿರಿಜಾ ಲೋಕೇಶ್, ಪ್ರಮೋದ್ ಶೆಟ್ಟಿ, ರಜನಿ ಭಾರದ್ವಾಜ್, ನಿವೇದಿತಾ ಗೌಡ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಮೊದಲಾದವರು ನಟಿಸಲಿದ್ದು, ಚಂದನ್ ಶೆಟ್ಟಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಸುರೇಶ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT