ಅದ್ಧೂರಿ ಮುಹೂರ್ತ ಸಮಾರಂಭ; ದೀಪ ಬೆಳಗಿಸಿ ಚಿತ್ರಕ್ಕೆ ಶುಭಕೋರಿದ ಎಚ್‌ಡಿ ದೇವೇಗೌಡ, ಎಚ್‌ಡಿ ಕುಮಾರಸ್ವಾಮಿ 
ಸಿನಿಮಾ ಸುದ್ದಿ

ನಿಖಿಲ್ ಕುಮಾರಸ್ವಾಮಿ ಹೊಸ ಚಿತ್ರಕ್ಕೆ ಅದ್ಧೂರಿ ಮುಹೂರ್ತ: ಶುಭ ಕೋರಿದ ಎಚ್‌ಡಿಕೆ, ಎಚ್‌ಡಿ ದೇವೇಗೌಡ

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಸಿನಿಮಾದಲ್ಲಿ ನಿಖಿಲ್ ಕುಮಾರ್ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿತು. 

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಸಿನಿಮಾದಲ್ಲಿ ನಿಖಿಲ್ ಕುಮಾರ್ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ದೀಪ ಬೆಳಗುವ ಮೂಲಕ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಿಖಿಲ್ ಕುಟುಂಬಸ್ಥರು ಮತ್ತು ಲೈಕಾ ಅಧ್ಯಕ್ಷ ಸುಭಾಸ್ಕರನ್ ಇದ್ದರು.

ಬೋಗನ್, ಭೂಮಿ, ಮತ್ತು ರೋಮಿಯೋ ಅಂಡ್ ಜೂಲಿಯೆಟ್‌ನಂತಹ ತಮಿಳು ಸಿನಿಮಾಗಳನ್ನು ನಿರ್ದೇಶಿಸಿದ್ದ ಲಕ್ಷ್ಮಣ್ ಅವರು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಬಹುಭಾಷಾ ಚಿತ್ರವೆಂದು ಬಿಂಬಿಸಲಾದ ಈ ಸಿನಿಮಾಗೆ ನಾಗ ಶೌರ್ಯ ನಟನೆಯ ತೆಲುಗಿನ 'ರಂಗಬಲಿ' ಸಿನಿಮಾದಲ್ಲಿ ನಟಿಸಿದ್ದ ಯುಕ್ತಿ ಥರೇಜಾ ಅವರನ್ನು ಕರೆತರಲಾಗಿದೆ. ಇತ್ತೀಚೆಗಷ್ಟೇ ನಮೋ ಭೂತಾತ್ಮ 2 ಚಿತ್ರದ ಭಾಗವಾಗಿದ್ದ ಕೋಮಲ್ ಕುಮಾರ್ ಕೂಡ ಚಿತ್ರದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಲಿದ್ದಾರೆ.

ನಿಖಿಲ್ ಕುಮಾರ್​, ಯುಕ್ತಿ ಥರೇಜಾ

ಕೊನೆಯ ಬಾರಿಗೆ ರೈಡರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಿಖಿಲ್, ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ಕೊಚ್ಚ ವಿರಾಮ ತೆಗೆದುಕೊಂಡಿದ್ದರು. ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದೆ. 

ಲೈಕಾ ಪ್ರೊಡಕ್ಷನ್ಸ್ ಜೊತೆಗಿನ ಸಹಯೋಗದ ಬಗ್ಗೆ ತನ್ನ ಹರ್ಷವನ್ನು ವ್ಯಕ್ತಪಡಿಸಿದ ನಿಖಿಲ್, ಮುಂದಿನ ವರ್ಷದಲ್ಲಿ ಮೂರು ಚಲನಚಿತ್ರಗಳನ್ನು ಮಾಡುವ ಮತ್ತು ಹಲವಾರು ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವುದಾಗಿ ಬಹಿರಂಗಪಡಿಸಿದರು.

ಕಾಂತಾರ ಮತ್ತು ವಿಕ್ರಾಂತ್ ರೋಣ ಸಿನಿಮಾಗಳ ಸಂಗೀತಕ್ಕಾಗಿ ಮೆಚ್ಚುಗೆ ಪಡೆದ ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿದ್ದು, ವಂಶಿ ಪಚ್ಚಿಪುಲುಸು ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆಯಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT