ಪ್ರಶಾಂತ್ ನೀಲ್ 
ಸಿನಿಮಾ ಸುದ್ದಿ

ಕೆಜಿಎಫ್ ಮತ್ತು ಸಲಾರ್ ಕಥೆಗಳ ನಡುವೆ ಸಂಪರ್ಕ; ಪ್ರಶಾಂತ್ ನೀಲ್ ಕೈಚಳಕದ ಬಗ್ಗೆ ಗರಿಗೆದರಿದ ನಿರೀಕ್ಷೆ

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷಿತ 'ಸಲಾರ್' ಸಿನಿಮಾ ಸೆಪ್ಟೆಂಬರ್ 28ರಂದು ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಈ ಹೈಬಜೆಟ್ ಆ್ಯಕ್ಷನ್ ಥ್ರಿಲ್ಲರ್ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರಶಾಂತ್ ಮತ್ತು ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. 

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಬಹು ನಿರೀಕ್ಷಿತ 'ಸಲಾರ್' ಸಿನಿಮಾ ಸೆಪ್ಟೆಂಬರ್ 28ರಂದು ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಈ ಹೈಬಜೆಟ್ ಆ್ಯಕ್ಷನ್ ಥ್ರಿಲ್ಲರ್ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರಶಾಂತ್ ಮತ್ತು ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸದ್ಯ ಪೋಸ್ಟ್-ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಟ್ರೇಲರ್‌ ಮತ್ತು ಅವರ ಪ್ರಚಾರದ ಕಾರ್ಯತಂತ್ರದ ಕುರಿತು ಶೀಘ್ರದಲ್ಲೇ ಮಾಹಿತಿ ಹೊರಬೀಳುವ ನಿರೀಕ್ಷೆ ವ್ಯಕ್ತವಾಗಿದೆ.

ಸದ್ಯದ ವಿಚಾರ ಏನೆಂದರೆ, ಪ್ರಶಾಂತ್ ನೀಲ್ ಅವರ ಹಿಂದಿನ ಬಿಗ್-ಬ್ಲಾಕ್‌ಬಸ್ಟರ್ ಸಿನಿಮಾ ಕೆಜಿಎಫ್‌ ಹಾಗೂ ಸಲಾರ್ ಚಿತ್ರಕ್ಕೂ ಒಂದಕ್ಕೊಂದು ಸಂಪರ್ಕ ಹೊಂದಿರಬಹುದು ಎನ್ನಲಾಗಿದೆ. ಕೆಜಿಎಫ್ ಮತ್ತು ಸಲಾರ್ ಎರಡನ್ನೂ ಎರಡು ಭಾಗಗಳಾಗಿ ಪರಿಗಣಿಸಿರುವ ಪ್ರಶಾಂತ್ ನೀಲ್, ಈ ಎರಡು ಚಲನಚಿತ್ರಗಳನ್ನು ಹೇಗೆ ಒಂದಕ್ಕೊಂದು ಸಂಪರ್ಕ ಹೊಂದಿರುವಂತೆ ಮಾಡುತ್ತಾರೆ ಎನ್ನುವುದು ಇದೀಗ ಆಸಕ್ತಿದಾಯಕ ವಿಚಾರವಾಗಿದೆ. ಮೂಲಗಳ ಪ್ರಕಾರ, ಕೆಜಿಎಫ್ 3 ಕೆಲಸ ಶುರುವಾಗಿದೆ ಎಂದಿದ್ದರೂ, ಎಲ್ಲರ ಕಣ್ಣುಗಳು ಈಗ ಸಲಾರ್ ಮೇಲೆ ನೆಟ್ಟಿದೆ. ಚಿತ್ರದಲ್ಲಿ ಶ್ರುತಿ ಹಾಸನ್ ಮತ್ತು ಪೃಥ್ವಿರಾಜ್ ಸುಕುಮಾರನ್ ಸಹ ನಟಿಸಿದ್ದಾರೆ.

ಸಲಾರ್ ಮತ್ತು ಕೆಜಿಎಫ್ ಚಿತ್ರಗಳಿಗೆ ಸಂಪರ್ಕ ಕಲ್ಪಿಸುವ ಕುರಿತು ಹಲವು ಊಹಾಪೋಹಗಳು ಈಗಾಗಲೇ ಹರಿದಾಡುತ್ತಿವೆ. ಸಲಾರ್ ಚಿತ್ರದಲ್ಲಿನ ಘಟನೆಗಳು ಕೆಜಿಎಫ್ ಅಧ್ಯಾಯ 2ರ ಘಟನೆಗಳೊಂದಿಗೆ ಏಕಕಾಲದಲ್ಲೇ ನಡೆಯುತ್ತವೆ ಎಂದು ಒಂದು ಮೂಲಗಳು ತಿಳಿಸಿದ್ದರೆ, ಕೆಜಿಎಫ್-3 ಸಿನಿಮಾವು ಸಲಾರ್-2 ಸಿನಿಮಾದೊಂದಿಗಿನ ಘಟನೆಗಳೊಂದಿಗೆ ಸಂಬಂಧ ಹೊಂದಿವೆ ಎಂದು ಹೇಳಲಾಗುತ್ತಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡ ಚಿತ್ರರಂಗವನ್ನು ಪರಿಚಯಿಸಿದ ಮತ್ತು ನಟ ಯಶ್ ಮತ್ತು ಪ್ರಶಾಂತ್ ನೀಲ್ ಅವರನ್ನು ಮನೆಮಾತಾಗುವಂತೆ ಮಾಡಿದ ಕೆಜಿಎಫ್ ಯಶಸ್ಸಿನ ನಂತರ ಸಲಾರ್ ಸಿನಿಮಾ ಮೇಲಿನ ನಿರೀಕ್ಷೆ ಗಗನಕ್ಕೇರಿದೆ. ಪ್ರಶಾಂತ್ ನೀಲ್ ಅವರು ‘ಕೆಜಿಎಫ್ 3’ ನಿರ್ದೇಶನ ಮಾಡಲಿದ್ದಾರೆ ಎಂಬುದು ‘ಕೆಜಿಎಫ್ 2’ ಕ್ಲೈಮ್ಯಾಕ್ಸ್​​ನಲ್ಲಿ ರಿವೀಲ್ ಆಗಿತ್ತು.
ಹೀಗಾಗಿ, ಪ್ರಶಾಂತ್ ನೀಲ್ ಅವರು ಸಲಾರ್ ಮತ್ತು ಕೆಜಿಎಫ್ ಸಿನಿಮಾಗಳ ನಡುವೆ ಹೇಗೆ ಸಂಪರ್ಕ ಸಾಧಿಸುವಂತೆ ನೋಡಿಕೊಳ್ಳುತ್ತಾರೆ ಎಂಬುದು ಇದೀಗ ವ್ಯಾಪಕ ನಿರೀಕ್ಷೆಯನ್ನು ಹುಟ್ಟುಹಾಕಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT