ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ಹೈದರಾಬಾದ್: ಅಪಾರ್ಟ್ ಮೆಂಟ್ ನಲ್ಲಿ ರೇವ್ ಪಾರ್ಟಿ; ಟಾಲಿವುಡ್ ನಿರ್ಮಾಪಕ ಸೇರಿ ಹಲವರ ಬಂಧನ

ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹೈದರಾಬಾದ್ ನಲ್ಲಿ ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಹೈದರಾಬಾದ್: ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹೈದರಾಬಾದ್ ನಲ್ಲಿ ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬುಧವಾರ  ಮಧ್ಯರಾತ್ರಿ ಹೈದರಾಬಾದ್​​ನ ಮಾದಾಪುರದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ನಡೆಸಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.  ಮಾದಾಪುರದ ವಿಠ್ಠಲ್​ರಾವ್ ನಗರದ ವೈಷ್ಣವಿ ಅಪಾರ್ಟ್​ಮೆಂಟ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಎನ್​ಸಿಬಿ ಅಧಿಕಾರಿಗಳು ದಾಳಿ ಮಾಡಿದರು.

ಈ ವೇಳೆ ಕೊಕೆನ್, ಎಲ್​ಎಸ್​ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಲರನ್ನೂ ಮಾದಾಪುರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಈ ಪಾರ್ಟಿಯಲ್ಲಿ ಭಾಗವಹಿಸಿದವರ ಹೆಸರು ಇನ್ನಷ್ಟೇ ಹೊರ ಬೀಳಬೇಕಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಈ ರೇವ್ ಪಾರ್ಟಿಯಲ್ಲಿ ಗಣ್ಯರ ಮಕ್ಕಳು ಭಾಗಿ ಆಗಿರುವ ಶಂಕೆ ಇದೆ. ಇವರಿಗೆ ಡ್ರಗ್ಸ್ ಸರಬರಾಜು ಮಾಡಿದವರು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮತ್ತೆ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ವಿಚಾರ ಮುನ್ನೆಲೆಗೆ ಬಂದಿರುವುದು ಅನೇಕರ ಬೇಸರಕ್ಕೆ ಕಾರಣ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್