ಕೃಷ್ಣಂ ಪ್ರಣಯ ಸಖಿ ಚಿತ್ರದ ಸೆಟ್ 
ಸಿನಿಮಾ ಸುದ್ದಿ

ಗೋಲ್ಡನ್ ಸ್ಟಾರ್ ಗಣೇಶ್‌ 41ನೇ ಚಿತ್ರ 'ಕೃಷ್ಣಂ ಪ್ರಣಯ ಸಖಿ' ಶೂಟಿಂಗ್ ಮುಕ್ತಾಯ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮತ್ತು ಶ್ರೀನಿವಾಸ ರಾಜು ನಿರ್ದೇಶನದ ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಡಬ್ಬಿಂಗ್ ಪ್ರಗತಿಯಲ್ಲಿದೆ. 

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮತ್ತು ಶ್ರೀನಿವಾಸ ರಾಜು ನಿರ್ದೇಶನದ ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಡಬ್ಬಿಂಗ್ ಪ್ರಗತಿಯಲ್ಲಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವ ನಿರೀಕ್ಷೆಯಿದೆ.

ದಂಡುಪಾಳ್ಯ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ರಾಜು ಮತ್ತು ಗಣೇಶ್ ಅವರು ಇದೇ ಮೊದಲ ಬಾರಿಗೆ ಈ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದ್ದು, ಐದು ಹಾಡುಗಳನ್ನು ಒಳಗೊಂಡಿದೆ. ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಮತ್ತು ಕೆಎಂ ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿದೆ.

ಕೃಷ್ಣಂ ಪ್ರಣಯ ಸಖಿ ಚಿತ್ರದಲ್ಲಿ ಗಣೇಶ್

ಕೃಷ್ಣಂ ಪ್ರಣಯ ಸಖಿ ಗಣೇಶ್ ಅವರ 41ನೇ ಚಿತ್ರವಾಗಿದ್ದು, ತ್ರಿಶೂಲ್ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಫ್ಯಾಮಿಲಿ ಎಂಟರ್‌ಟೈನರ್ ಆಗಿರುವ ಈ ಚಿತ್ರವು ಈ ಪ್ರೊಡಕ್ಷನ್ ಹೌಸ್‌ನ ಮೂರನೇ ಸಿನಿಮಾವಾಗಿದೆ. 

ಮಾಳವಿಕಾ ನಾಯರ್ ಈ ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡಿದ್ದು, ಶರಣ್ಯಾ ಶೆಟ್ಟಿ, ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶೃತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘು ರಾಮಯ್ಯ, ಮಾನಸಿ ಸುಧೀರ್, ಅಂಬುಜ್ ಮತ್ತು ಗಿರಿ ಶಿವಣ್ಣ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

Goa Nightclub Tragedy: ಡ್ಯಾನ್ಸ್ ಫ್ಲೋರ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 100 ಮಂದಿ ಇದ್ದರು..!

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

SCROLL FOR NEXT