ನಟ ಪೃಥ್ವಿರಾಜ್ ಸುಕುಮಾರನ್ 
ಸಿನಿಮಾ ಸುದ್ದಿ

Salaar: ಕನ್ನಡ ಸೇರಿ ಐದು ಭಾಷೆಗಳಲ್ಲೂ ಮಾಡಿದ ಪೃಥ್ವಿರಾಜ್ ಸುಕುಮಾರನ್ ಸ್ವತಃ ಡಬ್ಬಿಂಗ್‌!

ನಟ ಪ್ರಭಾಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಲಾರ್ ಚಿತ್ರವು ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಡಿಸೆಂಬರ್ 22 ರಂದು ಬಿಡುಗಡೆಗೆ ಸಜ್ಜಾಗಿದೆ. ಈ ಬೆನ್ನಲ್ಲೇ ವರದ ಪಾತ್ರದಲ್ಲಿ ನಟಿಸಿರುವ ಪೃಥ್ವಿರಾಜ್ ಸುಕುಮಾರನ್ ತಮ್ಮ ಪಾತ್ರಕ್ಕಾಗಿ ಎಲ್ಲಾ ಐದೂ ಭಾಷೆಗಳಲ್ಲಿ ತಾವೇ ಧ್ವನಿ ನೀಡಿದ್ದಾರೆ.

ನಟ ಪ್ರಭಾಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಲಾರ್ ಚಿತ್ರವು ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಡಿಸೆಂಬರ್ 22 ರಂದು ಬಿಡುಗಡೆಗೆ ಸಜ್ಜಾಗಿದೆ. ಈ ಬೆನ್ನಲ್ಲೇ ವರದ ಪಾತ್ರದಲ್ಲಿ ನಟಿಸಿರುವ ಪೃಥ್ವಿರಾಜ್ ಸುಕುಮಾರನ್ ತಮ್ಮ ಪಾತ್ರಕ್ಕಾಗಿ ಎಲ್ಲಾ ಐದೂ ಭಾಷೆಗಳಲ್ಲಿ ತಾವೇ ಧ್ವನಿ ನೀಡಿದ್ದಾರೆ.

ಚಿತ್ರದ ಅಂತಿಮ ಡಬ್ಬಿಂಗ್ ಕಾರ್ಯ ಮುಕ್ತಾಯಗೊಂಡ ನಂತರ ನಟ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, 'ಸಲಾರ್ ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದಿದೆ. ಇಷ್ಟು ವರ್ಷಗಳಲ್ಲಿ ನಾನು ಕೆಲಸ ಮಾಡಿದ ಎಲ್ಲಾ ಭಾಷೆಗಳಲ್ಲಿಯೂ ನಾನೇ ಧ್ವನಿ ನೀಡುವ ಅವಕಾಶ ನನಗೆ ಸಿಕ್ಕಿದೆ. ಈಗಲೂ ನನ್ನ ಪಾತ್ರಕ್ಕೆ ಐದು ಭಾಷೆಗಳಲ್ಲಿ ನಾನೇ ಡಬ್ ಮಾಡಿದ್ದೇನೆ. ಆದರೆ, ಒಂದೇ ಚಿತ್ರದಲ್ಲಿ ಪಾತ್ರಕ್ಕೆ 5 ಭಾಷೆಗಳಲ್ಲಿ ಡಬ್ ಮಾಡಿರುವುದು ನನಗೆ ಹೊಸದು. ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ತನ್ನ ಪಾತ್ರಕ್ಕೆ ತಾನೇ ಧ್ವನಿ ನೀಡಿದ್ದೇನೆ' ಎಂದು ಬರೆದುಕೊಂಡಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲಂಸ್ ನಿರ್ಮಾಣದ ಈ ಚಿತ್ರದಲ್ಲಿ ಶ್ರುತಿ ಹಾಸನ್, ಶ್ರೀಯಾ ರೆಡ್ಡಿ, ಜಗಪತಿ ಬಾಬು, ಮಧು ಗುರುಸ್ವಾಮಿ, ರಾಮಚಂದ್ರ ರಾಜು, ಗರುಡ ರಾಮ್ ಮತ್ತು ತಿನ್ನು ಆನಂದ್ ಸೇರಿದಂತೆ ಇತರರು ನಟಿಸಿದ್ದಾರೆ.

ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದು, ಭುವನ್ ಗೌಡ ಅವರ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಕಲನ ಮತ್ತು ಶಿವಕುಮಾರ್ ಮತ್ತು ಟಿಎಲ್ ವೆಂಕಟಾಚಲಪತಿ ಅವರ ನಿರ್ಮಾಣ ವಿನ್ಯಾಸವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT