ಕಾಟೇರಾ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಟ್ರೈಲರ್ ರಿಲೀಸ್ ಗೆ ದಿನಾಂಕ ಫಿಕ್ಸ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಕಾಟೇರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈಗಾಗಲೇ ಸಿನಿಮಾ ಬಗ್ಗೆ ಸಕತ್ ಹೈಪ್ ಕ್ರಿಯೆಟ್ ಆಗಿದ್ದು, ದಾಸನ ಅಭಿಮಾನಿಗಳು 'ಕಾಟೇರ'ನ ಆಗಮನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಕಾಟೇರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈಗಾಗಲೇ ಸಿನಿಮಾ ಬಗ್ಗೆ ಸಕತ್ ಹೈಪ್ ಕ್ರಿಯೆಟ್ ಆಗಿದ್ದು, ದಾಸನ ಅಭಿಮಾನಿಗಳು 'ಕಾಟೇರ'ನ ಆಗಮನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ.

ಇದರ ಬೆನ್ನಲ್ಲೇ ಚಿತ್ರತಂಡ ಅಭಿಮಾನಿಗಳಿಗೆ ಸಕತ್ ಸಿಹಿ ಸುದ್ದಿ ನೀಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಡಿಸೆಂಬರ್ 13 ರಂದು 'ಕಾಟೇರ' ಬಗ್ಗೆ ಅಪ್‌ಡೇಟ್ ಹಂಚಿಕೊಳ್ಳುವುದಾಗಿ ನಿರ್ದೇಶಕ ತರುಣ್ ಸುಧೀರ್ ಮಾಹಿತಿ ನೀಡಿದ್ದರು. ಇದು ಹಲವು ಗೊಂದಲಕ್ಕೆ ಕಾರಣವಾಗಿತ್ತು. ಡಿಸೆಂಬರ್ 16 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಚಿತ್ರತಂಡ ಈಗಾಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, ಸಾಕಷ್ಟು ಮೆಚ್ಚುಗೆ ಪಡೆದಿದೆ. ಕಾಟೇರ ಸಿನಿಮಾದ ಎರಡು ಹಾಡು ರಿಲೀಸ್ ಆಗಿವೆ. ಎರಡೂ ಹಾಡಲ್ಲಿ ಆರಾಧನಾ ಹಾಗೂ ದರ್ಶನ್ ಪ್ರೀತಿಯ ಕಥೆಯ ಚಿತ್ರಣ ಇದೆ. ಆದರೆ ಸಿನಿಮಾದ ಮೊದಲ ಮೇಕಿಂಗ್ ವಿಡಿಯೋ ಮಾತ್ರ ಸಾಕಷ್ಟು ವಿಷಯದ ಮೇಲೆ ಬೆಳಕು ಚೆಲ್ಲಿದೆ. ಚಿತ್ರದ ಪ್ರತಿ ವಿಷಯದ ಝಲಕ್ ಅನ್ನ ಇಲ್ಲಿ ಕೊಟ್ಟಿದೆ ಅಂತಲೇ ಹೇಳಬಹುದು.

ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ವಾರ ಟ್ರೇಲರ್ ಬಿಡುಗಡೆ ಮಾಡುತ್ತಾರೆ ಎಂದು ಅಭಿಮಾನಿಗಳು ನಂಬಿದ್ದರು. ಹಾಗೇಯೇ ಡಿಸೆಂಬರ್ 16 ರಂದು ಕಾಟೇರ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ನಟ ದರ್ಶನ್ ತೂಗುದೀಪ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 29 ರಂದು ಬಿಡುಗಡೆಗೆ  ದಿನಾಂಕ ನಿಗದಿಪಡಿಸಲಾಗಿದೆ,  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ತರುಣ್ ಸುಧೀರ್, ರಾಬರ್ಟ್ ನಂತರದ ಮತ್ತೊಮ್ಮೆ ಕಾಟೇರಾ ಸಿನಿಮಾಗಾಗಿ ಒಂದುಗೂಡಿದ್ದಾರೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಡೈರೆಕ್ಟರ್ ತರುಣ್ ಸುಧೀರ್ ತಮ್ಮ ಈ ಚಿತ್ರದಲ್ಲಿ ಒಳ್ಳೆ ಪಾತ್ರಗಳನ್ನೆ ಕ್ರಿಯೇಟ್ ಮಾಡಿದ್ದಾರೆ. ಶೃತಿ, ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್