ಚೇತನ್ ಅಹಿಂಸಾ 
ಸಿನಿಮಾ ಸುದ್ದಿ

ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಮಾನಕರ ಪೋಸ್ಟ್: ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು

ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲಾಗಿದೆ. 

ಬೆಂಗಳೂರು: ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲಾಗಿದೆ. 

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ವಿರುದ್ಧ ವಕೀಲ ಆರ್‌ಎಲ್ಎನ್ ಮೂರ್ತಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟ ಚೇತನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ವಕೀಲ ಆರ್ ಎಲ್ ಎನ್ ಮೂರ್ತಿ ಎಂಬುವರು ದೂರು ನೀಡಿದ್ದು, ‘ನಟ ಎಂದು ಹೇಳಿಕೊಳ್ಳುವ ವಿದೇಶಿ ಪ್ರಜೆಯಾದ ಚೇತನ್ ಅವರಿಂದ ನಾಡಪ್ರಭು ಕೆಂಪೇಗೌಡರಿಗೆ ಅವಹೇಳನವಾಗಿದೆ ಎಂದು ಆರೋಪ ಮಾಡಿದ್ದಾರೆ.

ಚೇತನ್ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲೇನಿದೆ?
ಇಬ್ಬರು ಯೋಧರ ಕಥೆ: ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ

ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ

ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ

ಈ ರೀತಿ ನಟ ಚೇತನ್ ಅಹಿಂಸಾ ಅವರು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ಇದರಿಂದ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ಉಂಟಾಗಿದೆ ಎಂದು ಆರೋಪಿಸಿ ವಕೀಲ ಆರ್ ಎಲ್ ಎನ್ ಮೂರ್ತಿ ಅವರು ನೀಡಿರುವ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ