ವಾಟ್ ಟು ಡು ಮಾಮ ಹಾಡಿನಲ್ಲಿ ಚಂದನ್ ಶೆಟ್ಟಿ 
ಸಿನಿಮಾ ಸುದ್ದಿ

'ವಾಟ್ ಟು ಡು ಮಾಮ?': ಹೊಸ ವರ್ಷಕ್ಕೆ ಹೊಸ ಹಾಡು ಬಿಡುಗಡೆ ಮಾಡಿದ ಚಂದನ್ ಶೆಟ್ಟಿ

ಕನ್ನಡದ ಜನಪ್ರಿಯ ರ‍್ಯಾಪರ್ ಮತ್ತು ನಟ ಚಂದನ್ ಶೆಟ್ಟಿ ಹೊಸ ವರ್ಷಕ್ಕೆ ಹೊಸ ಹಾಡನ್ನು ಬಿಡುಗಡೆ ಮಾಡಿದ್ದಾರೆ. 'ವಾಟ್ ಟು ಡು ಮಾಮ?' ಎನ್ನುವ ಈ ಜಾನಪದ ಶೈಲಿಯ ಥೀಮ್ ಅನ್ನು ಗಾಯಕನ YouTube ಚಾನಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಕನ್ನಡದ ಜನಪ್ರಿಯ ರ‍್ಯಾಪರ್ ಮತ್ತು ನಟ ಚಂದನ್ ಶೆಟ್ಟಿ ಹೊಸ ವರ್ಷಕ್ಕೆ ಹೊಸ ಹಾಡನ್ನು ಬಿಡುಗಡೆ ಮಾಡಿದ್ದಾರೆ. 'ವಾಟ್ ಟು ಡು ಮಾಮ?' ಎನ್ನುವ ಈ ಜಾನಪದ ಶೈಲಿಯ ಥೀಮ್ ಅನ್ನು ಗಾಯಕನ YouTube ಚಾನಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹಾಡು ಕಿರಿಯ ಪ್ರೇಕ್ಷಕರನ್ನು ಗುರಿಯಾಗಿಟ್ಟುಕೊಂಡಿದ್ದು, ಅವರ ಸಮಸ್ಯೆಗಳನ್ನು ಪ್ರತಿಧ್ವನಿಸುತ್ತದೆ. ಇದು 'ಪ್ರಾಬ್ಲಂ, ಪ್ರಾಬ್ಲಂ, ಪ್ರಾಬ್ಲಂ ವಾಟ್ ಟು ಡು ಮಾಮ?' ಎಂಬ ಸಾಲಿನಿಂದ ಪ್ರಾರಂಭವಾಗುತ್ತದೆ. ಚಂದನ್ ಶೆಟ್ಟಿ ಅವರೇ ಸಂಗೀತ ಸಂಯೋಜನೆ ಮತ್ತು ನಿರ್ದೇಶನ ಮಾಡಿದ್ದಾರೆ.

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡು ಎಲ್ಲರ ಮನಸೂರೆಗೊಳ್ಳಲಿದೆ ಎಂದು ಚಂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಡಿನಲ್ಲಿ ಚಂದನ್ ಶೆಟ್ಟಿ ಪಕ್ಕಾ ಲೋಕಲ್ ಬಾಯ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲಿ ಚಂದನ್ ಶೆಟ್ಟಿಯವರ ಮಾವನ ಪಾತ್ರದಲ್ಲಿ ಹಿರಿಯ ನಟ ರಂಗಾಯಣ ರಘು ಕೂಡ ಕಾಣಿಸಿಕೊಂಡಿದ್ದಾರೆ.

ಹೆಚ್ಚುವರಿಯಾಗಿ, ಈ ಹಾಡಿನಲ್ಲಿ ಜನಪ್ರಿಯ ರಿಯಾಲಿಟಿ ಶೋ ಗಿಚ್ಚಿ ಗಿಲಿಯ ಕಲಾವಿದರಾದ ರಾಘವೇಂದ್ರ, ಆರ್‌ಜೆ ವಿಕ್ಕಿ, ಹುಲಿ ಕಾರ್ತಿಕ್, ನಿತಿನ್ ಅಮೀನ್, ಶಿದ್ ಶ್ಯಾದ್ ಶಿವ್ ಮತ್ತು ಎನ್‌ಸಿ ಅಯ್ಯಪ್ಪ ಸೇರಿದಂತೆ ಸಮಗ್ರ ತಾರಾಗಣವನ್ನು ಹೊಂದಿದೆ. 

ಚಂದನ್ ಶೆಟ್ಟಿ ನಿರ್ಮಿಸಿರುವ ಈ ಹಾಡಿಗೆ ವಿಜಯ್ ಈಶ್ವರ್ ಸಾಹಿತ್ಯ ಬರೆದಿದ್ದು, ನೃತ್ಯ ನಿರ್ದೇಶನವನ್ನು ಮುರುಗ ನಿರ್ವಹಿಸಿದ್ದಾರೆ. ಉದಯ್ ಲೀಲಾ ಅವರ ಛಾಯಾಗ್ರಹಣ, ಸತೀಶ್ ಚಂದ್ರ ಅವರ ಸಂಕಲನ ಮತ್ತು ದಿವಾಕರ್ ಕಲಾ ವಿಭಾಗವನ್ನು ನೋಡಿಕೊಂಡಿದ್ದಾರೆ.

ಈಮಧ್ಯೆ, ನಟರಾಗಿಯೂ ಬದಲಾಗಿರುವ ಚಂದನ್, ಸೂತ್ರಧಾರಿ, ‘ಎಲ್ರ ಕಾಲೆಳಿಯತ್ತೆ ಕಾಲ’ ಸೇರಿದಂತೆ ತಮ್ಮ ಸಿನಿಮಾಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ ಮತ್ತು ಸದ್ಯ ಮತ್ತೊಂದು ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT