ಅಡ್ವಾನ್ಸ್ ಬುಕ್ಕಿಂಗ್ನಲ್ಲೇ ಕೋಟಿ ರೂ. ಬಾಚಿ ಇತಿಹಾಸ ಸೃಷ್ಟಿಸಿದ ದರ್ಶನ್ ನಟನೆಯ ಕಾಟೇರ!
ದರ್ಶನ್ ನಟನೆಯ ಕಾಟೇರ ಸಿನಿಮಾ ಡಿಸೆಂಬರ್ 29 ರಂದು ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಆಗಲಿದೆ. ಮಧ್ಯರಾತ್ರಿ 12 ಗಂಟೆಗೆ ಹಲವೆಡೆ ಕಾಟೇರ ಮೊದಲ ಶೋ ಆರಂಭವಾಗಲಿದೆ.
ದರ್ಶನ್ ನಟನೆಯ ಕಾಟೇರ ಸಿನಿಮಾ ಡಿಸೆಂಬರ್ 29 ರಂದು ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಆಗಲಿದೆ. ಮಧ್ಯರಾತ್ರಿ 12 ಗಂಟೆಗೆ ಹಲವೆಡೆ ಕಾಟೇರ ಮೊದಲ ಶೋ ಆರಂಭವಾಗಲಿದೆ.
ಈಗಾಗಲೇ ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ. ವರ್ಷಾಂತ್ಯಕ್ಕೆ 'ಕಾಟೇರ' ಸಿನಿಮಾ ತೆರೆಗೆ ಬರುತ್ತಿದ್ದು, ತರುಣ್ ಕಿಶೋರ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ರಾಬರ್ಟ್ ನಂತರ ಎರಡನೇ ಬಾರಿಗೆ ಈ ಜೋಡಿ ಕೈ ಜೋಡಿಸಿದ್ದು, ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ.
ದರ್ಶನ್ ತೂಗುದೀಪ ಅಭಿನಯದ 'ಕಾಟೇರ' ಸಿನಿಮಾ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಬರುತ್ತಿದೆ. ವ್ಯವಸ್ಥೆಯ ವಿರುದ್ಧ ಹೋರಾಡುವ ನಾಯಕನಾಗಿ ಕಾಣಿಸಿಕೊಂಡಿರುವುದು ಟ್ರೈಲರ್ನಲ್ಲಿ ಕಾಣಿಸಿದೆ.
ಇತಿಹಾಸದಲ್ಲಿ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಅಲ್ಲದ ಸಿನಿಮಾವೊಂದು ಅಡ್ವಾನ್ಸ್ ಬುಕ್ಕಿಂಗ್ನಲ್ಲಿ ಇಂತಹ ದಾಖಲೆ ಮಾಡಿದೆ. ಬರೋಬ್ಬರಿ ಒಂದು ಕೋಟಿ ರೂಪಾಯಿಯ ಕಲೆಕ್ಷನ್ ಮಾಡಿದೆ ಕಾಟೇರ ತಂಡ. ಈ ಬಗ್ಗೆ ಕಾಟೇರ ಅಫಿಶಿಯಲ್ ಸೋಶಿಯಲ್ ಮಿಡಿಯಾ ಹ್ಯಾಂಡಲ್ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಒಂದು ಕೋಟಿಗೂ ಹೆಚ್ಚು ಹಣ ಕಲೆಕ್ಟ್ ಮಾಡಿರುವ ಕಾಟೇರ ತಂಡ ಇಲ್ಲಿಯವರೆಗೆ ಬರೋಬ್ಬರಿ 50 ಸಾವಿರಕ್ಕೂ ಹೆಚ್ಚು ಟಿಕೆಟ್ ಮಾರಾಟ ಮಾಡಿದೆ. ಈ ಬಗ್ಗೆಯೂ ಮಾಹಿತಿ ಹಂಚಿಕೊಳ್ಳಲಾಗಿದೆ. ಮಧ್ಯರಾತ್ರಿಯೇ 'ಕಾಟೇರ'ನ ಅಬ್ಬರ ಜಾಸ್ತಿಯಾಗುತ್ತಿದ್ದು, ಈಗಾಗಲೇ ಬೆಳಗಿನ ಜಾವ 5 ಗಂಟೆ ಹಾಗೂ 10 ಗಂಟೆಯ ಶೋಗಳು ಕೆಲವೆಡೆ ಸೋಲ್ಡೌಟ್ ಆಗಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.