ನಿಹಾಲ್ ಮತ್ತು ರಿಷಿಕಾ ಶರ್ಮಾ 
ಸಿನಿಮಾ ಸುದ್ದಿ

ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ 'ವಿಜಯಾನಂದ' ಸಿನಿಮಾ ನಾಯಕ ಮತ್ತು ಡೈರೆಕ್ಟರ್!

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಿಹಾಲ್​ ​ ಹಾಗೂ ನಿರ್ದೇಶಕಿ ರಿಷಿಕಾ ಶರ್ಮಾ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ನೆರವೇರಲಿದೆ.

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಿಹಾಲ್​​ ಹಾಗೂ ನಿರ್ದೇಶಕಿ ರಿಷಿಕಾ ಶರ್ಮಾ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ನೆರವೇರಲಿದೆ.

ವಿಜಯಾನಂದ ಸಿನಿಮಾದ ನಿರ್ದೇಶಕಿಯಾಗಿ ಗಮನಸೆಳೆದಿರುವ ರಿಷಿಕಾ ಶರ್ಮಾ ಅವರು ನಟ ನಿಹಾಲ್‌ ಅವರೊಂದಿಗೆ ಶೀಘ್ರದಲ್ಲೇ  ಹಸೆಮಣೆ ಏರಲಿದ್ದಾರೆ. ಈ ಬಗ್ಗೆ ರಿಷಿಕಾ ಶರ್ಮಾ ಮತ್ತು ನಿಹಾಲ್‌ ಅವರು ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ನಿಮ್ಮೆಲ್ಲರೊಂದಿಗೆ ಒಂದು ಖುಷಿ ಸುದ್ದಿಯನ್ನು ಹಂಚಿಕೊಳ್ಳುವುದಕ್ಕೆ ನಾನು ಎಕ್ಸೈಟ್ ಆಗಿದ್ದೇನೆ. ನಿಹಾಲ್ ಅವರೊಂದಿಗೆ ನಾನು ಇದೇ ಫೆಬ್ರವರಿ ತಿಂಗಳಲ್ಲಿ ಮದುವೆ ಆಗಲಿದ್ದೇನೆ. ನಮ್ಮ ಸುಂದರ ಲವ್ ಲವ್‌ ಸ್ಟೋರಿ ಸೃಷ್ಟಿಯಾಗಲು ಲಕ್ಷಾಂತರ ಸಣ್ಣ ಕ್ಷಣಗಳಿವೆ. ನಮ್ಮ ಸಂತೋಷದಾಯಕ ಮತ್ತು ಅರ್ಥಪೂರ್ಣ 9 ವರ್ಷಗಳ ಸ್ನೇಹ ಮತ್ತು ಪ್ರೀತಿಗೆ ದಾರಿಯಾಗಿದೆ' ಎಂದು ರಿಷಿಕಾ ಬರೆದುಕೊಂಡಿದ್ದಾರೆ. ಹರಸಿ ಹಾರೈಸಿ, ನಿಮ್ಮ ಪ್ರೀತಿ, ವಿಶ್ವಾಸ ಇರಲಿ ಎಂದು ರಿಷಿಕಾ ಮತ್ತು ನಿಹಾಲ್ ಜೋಡಿ ಕೇಳಿಕೊಂಡಿದ್ದಾರೆ.

2018ರಲ್ಲಿ ತೆರೆಕಂಡಿದ್ದ 'ಟ್ರಂಕ್' ಸಿನಿಮಾದಲ್ಲಿ ನಿಹಾಲ್ ನಟಿಸಿದ್ದರು. ಆ ಸಿನಿಮಾವನ್ನು ನಿರ್ದೇಶನ ಮಾಡಿದ್ದು ರಿಷಿಕಾ ಶರ್ಮಾ. ಅದು ಅವರ ನಿರ್ದೇಶನದ ಮೊದಲ ಸಿನಿಮಾವಾಗಿತ್ತು. ಇದೊಂದು ಹಾರರ್ ಥ್ರಿಲ್ಲರ್ ಮಾದರಿಯ ಸಿನಿಮಾವಾಗಿದ್ದು, ಉತ್ತಮ ವಿಮರ್ಶೆ ಪಡೆದುಕೊಂಡಿತ್ತು. ನಟ ನಿಹಾಲ್‌ಗೂ ಕೂಡ ಅದು ಹೀರೋ ಆಗಿ ಮೊದಲ ಸಿನಿಮಾವಾಗಿತ್ತು.

ಕಳೆದ ವರ್ಷ ತೆರೆಕಂಡಿದ್ದ 'ವಿಜಯಾನಂದ' ಸಿನಿಮಾವನ್ನು ರಿಷಿಕಾ ಶರ್ಮಾ ನಿರ್ದೇಶನ ಮಾಡಿದ್ದರು. ಬಿಗ್ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾವು ಉದ್ಯಮಿ ಡಾ ವಿಜಯ ಸಂಕೇಶ್ವರ ಅವರ ಬಯೋಪಿಕ್ ಇದಾಗಿತ್ತು. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾವನ್ನು ಆನಂದ ಸಂಕೇಶ್ವರ ಅವರು ನಿರ್ಮಾಣ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT