ನಟಿ ಅಭಿನಯ 
ಸಿನಿಮಾ ಸುದ್ದಿ

ವರದಕ್ಷಿಣಿ ಕಿರುಕುಳ ಪ್ರಕರಣ: ನಟಿ ಅಭಿನಯ ಬಂಧನಕ್ಕಾಗಿ ಲುಕ್ ಔಟ್ ನೋಟಿಸ್

ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ ಪ್ರಕರಣದಲ್ಲಿ ಖ್ಯಾತ ನಟಿ ಅಭಿನಯ ಅವರ ಬಂಧನಕ್ಕಾಗಿ ಚಂದ್ರಾ ಲೇಔಟ್ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.

ಬೆಂಗಳೂರು: ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ ಪ್ರಕರಣದಲ್ಲಿ ಖ್ಯಾತ ನಟಿ ಅಭಿನಯ ಅವರ ಬಂಧನಕ್ಕಾಗಿ ಚಂದ್ರಾ ಲೇಔಟ್ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಜೈಲು ಶಿಕ್ಷೆ ಪ್ರಕಟ ಬಳಿಕ ತಲೆ ಮರೆಸಿಕೊಂಡಿರುವ ಅಭಿನಯ ಹಾಗೂ ಅವರ ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು  ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ. 

ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ ಅವರು ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಅಭಿನಯ ಅವರು ಹೈಕೋರ್ಟ್​ಗೆ  ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.  ಆದರೆ, ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ , ಅಭಿನಯ ಅವರ ತಾಯಿ ಜಯಮ್ಮಗೆ 5 ವರ್ಷ, ಅಭಿನಯ ಹಾಗೂ ಅವರ ಸಹೋದರ ಚೆಲುವರಾಜ್​ಗೆ 2 ವರ್ಷ ಶಿಕ್ಷೆ ನೀಡಲಾಗಿತ್ತು.

ಕೋರ್ಟ್​ ಆದೇಶದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ ಆರೋಪಿಗಳು  ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು, ಪೊಲೀಸರು ಲುಕ್​ಔಟ್ ನೋಟಿಸ್​ ಜಾರಿ ಮಾಡಿದ್ದಾರೆ. 

ನಟಿ ಅಭಿನಯ 1983ರಲ್ಲಿ ಖ್ಯಾತ ನಿರ್ದೇಶಕ ಕಾಶಿನಾಥ್ ಅವರ ಸೂಪರ್ ಹಿಟ್ ಚಿತ್ರ `ಅನುಭವ' ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಕೆಲ ಕಾಲ ಚಿತ್ರರಂಗದಿಂದ ದೂರವಾಗಿದ್ದ ಇವರು, ಮತ್ತೆ ಹಿಟ್ಲರ್ ಕಲ್ಯಾಣ ಮತ್ತಿತರ ಜನಪ್ರಿಯ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದರು. ಇದೀಗ ಮತ್ತೆ ಧಾರವಾಹಿಯಿಂದಲೂ ಔಟ್ ಆಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

'ಅಶ್ಲೀಲ, ಅಸಭ್ಯ, ವಿಕೃತಿ': TVK ಮಹಿಳಾ ಅಭ್ಯರ್ಥಿ ಕುರಿತ ಸ್ಟಾಲಿನ್ ಹೇಳಿ ಖಂಡಿಸಿದ CM ವಿಜಯ್; ಚುನಾವಣಾ ಆಯೋಗಕ್ಕೆ ದೂರು

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video